ದೇಶ

LokSabha Elections 2024: 5ನೇ ಹಂತ; ಸಂಜೆ 5 ಗಂಟೆ ವೇಳೆಗೆ ಶೇ.57.51ರಷ್ಟು ಮತದಾನ; ಬಂಗಾಳದಲ್ಲಿ ಗರಿಷ್ಠ

ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಮುಕ್ತಾಯವಾಗಿದ್ದು, ಸಂಜೆ 5 ಗಂಟೆ ವೇಳೆಗೆ ಶೇ.57.51ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನವಣಾ ಆಯೋಗ ಮಾಹಿತಿ ನೀಡಿದೆ.

LokSabha Elections 2024: 5ನೇ ಹಂತ; ಸಂಜೆ 5 ಗಂಟೆ ವೇಳೆಗೆ ಶೇ.57.51ರಷ್ಟು ಮತದಾನ; ಬಂಗಾಳದಲ್ಲಿ ಗರಿಷ್ಠ
ಮತದಾನ (ಸಾಂದರ್ಭಿಕ ಚಿತ್ರ)
Published On :

ನವದೆಹಲಿ: ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಮುಕ್ತಾಯವಾಗಿದ್ದು, ಸಂಜೆ 5 ಗಂಟೆ ವೇಳೆಗೆ ಶೇ.57.51ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನವಣಾ ಆಯೋಗ ಮಾಹಿತಿ ನೀಡಿದೆ.

ಸೋಮವಾರ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಕಡೆ ಶಾಂತಿಯುತವಾಗಿ ಮತದಾನ ನಡೆದಿದ್ದು, ಪಶ್ಚಿಮ ಬಂಗಾಳದ ಕೆಲವೆಡೆ ಮಾತ್ರ ಗಲಾಟೆ ನಡೆದಿವೆ ಎಂದು ತಿಳಿದುಬಂದಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಶೇ.57.51ರಷ್ಟು ಮತದಾನವಾಗಿದೆ. ಈ ಹಿಂದಿನ ಹಂತಗಳಿಗೆ ಹೋಲಿಕೆ ಮಾಡಿದರೆ 5ನೇ ಹಂತದಲ್ಲಿ ಮತದಾನ ಪ್ರಮಾಣ ಕಡಿಮೆಯಾದಂತಿದೆ.

ಪಶ್ಚಿಮ ಬಂಗಾಳದಲ್ಲಿ ಗರಿಷ್ಠ, ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ

ಇನ್ನು ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.63ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.49.01ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲೂ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದಲ್ಲಿ ಶೇ.57.79% ಮತದಾನವಾಗಿದ್ದು, ಒಡಿಶಾದಲ್ಲಿ 60.72% ಮತದಾನ, ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ 54.67% ಮತ್ತು ಬಿಹಾರದಲ್ಲಿ 52.60% ರಷ್ಟು ಮತದಾನ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.