ಮುಂಬೈ: ಡೊಂಬಿವಾಲಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟ; ನಾಲ್ವರು ಸಾವು
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 34 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಸಮೀಪದ ಡೊಂಬಿವಾಲಿ ಎಂಐಡಿಸಿ ಪ್ರದೇಶದ 2ನೇ ಹಂತದಲ್ಲಿರುವ ಅಮುದನ್ ಕೆಮಿಕಲ್ ಕಂಪನಿಯಲ್ಲಿ ಇಂದು ಮಧ್ಯಾಹ್ನ 1.40 ರ ಸುಮಾರಿಗೆ ಬಾಯ್ಲರ್ ಸ್ಫೋಟಗೊಂಡ ನಂತರ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮುಂಬೈನಿಂದ ಸುಮಾರು 40 ಕಿಮೀ ದೂರದಲ್ಲಿರುವ ಡೊಂಬಿವಾಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಕೈಗಾರಿಕಾ ಸಚಿವ ಉದಯ್ ಸಮಂತ್, ಸ್ಥಳದಿಂದ ಇದುವರೆಗೆ ಮೂರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ.
ಸ್ಫೋಟದ ಶಬ್ದವು ಒಂದು ಕಿಲೋಮೀಟರ್ ದೂರದವರೆಗೂ ಕೇಳಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಕಟ್ಟಡಗಳ ಗಾಜಿನ ಕಿಟಕಿಗಳು ಬಿರುಕು ಬಿಟ್ಟಿದ್ದು, ಸುತ್ತಮುತ್ತಲಿನ ಹಲವು ಮನೆಗಳಿಗೆ ಹಾನಿಯಾಗಿದೆ.
ಮಧ್ಯಾಹ್ನ 1.40ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಥಾಣೆ ಮಹಾನಗರ ಪಾಲಿಕೆ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಯಾಸಿನ್ ತದ್ವಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



