ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: 7 ಮಾವೋವಾದಿಗಳ ಹತ್ಯೆ
ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಹತರಾಗಿದ್ದಾರೆ.

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿಯ ಜಂಟಿ ತಂಡ, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ಆರಂಭವಾಯಿತು ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಅವರು ಹೇಳಿದ್ದಾರೆ.
ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ 'ಮಾವೋವಾದಿ ಸಮವಸ್ತ್ರ'ದಲ್ಲಿದ್ದ ಏಳು ನಕ್ಸಲರು ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ದಾಂತೇವಾಡ, ನಾರಾಯಣಪುರ ಮತ್ತು ಬಸ್ತಾರ್ ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದ ಸಿಬ್ಬಂದಿ, ಬಸ್ತಾರ್ ಫೈಟರ್ಸ್ ಮತ್ತು ವಿಶೇಷ ಕಾರ್ಯಪಡೆ- ರಾಜ್ಯ ಪೊಲೀಸ್‌ನ ಎಲ್ಲಾ ಘಟಕಗಳು, ಮಾವೋವಾದಿಗಳ ಉಪಸ್ಥಿತಿಯ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.
ಎನ್‌ಕೌಂಟರ್ ಸ್ಥಳದಿಂದ ಒಟ್ಟು ಏಳು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



