ಇಂಡಿಯಾ ಬ್ಲಾಕ್ ಮುಸ್ಲಿಂ ವೋಟ್ ಬ್ಯಾಂಕ್‌ಗಾಗಿ 'ಮುಜ್ರಾ' ಬೇಕಾದರೂ ಮಾಡುತ್ತದೆ: ಪ್ರಧಾನಿ ಮೋದಿ
ಇಂಡಿಯಾ ಬ್ಲಾಕ್ ಮುಸ್ಲಿಂ ಮತಬ್ಯಾಂಕ್‌ಗಾಗಿ ಗುಲಾಮಗಿರಿ ಮತ್ತು “ಮುಜ್ರಾ”(ನೃತ್ಯ) ಬೇಕಾದರೂ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪ್ರತಿಪಕ್ಷಗಳ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಕ್ರಮ್(ಬಿಹಾರ): ಇಂಡಿಯಾ ಬ್ಲಾಕ್ ಮುಸ್ಲಿಂ ಮತಬ್ಯಾಂಕ್‌ಗಾಗಿ ಗುಲಾಮಗಿರಿ ಮತ್ತು “ಮುಜ್ರಾ”(ನೃತ್ಯ) ಬೇಕಾದರೂ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪ್ರತಿಪಕ್ಷಗಳ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇಂದು ಬಿಹಾರದ ಪಾಟ್ನಾದಿಂದ ಸುಮಾರು 40 ಕಿಮೀ ದೂರದಲ್ಲಿರುವ ಪಾಟಲಿಪುತ್ರ ಲೋಕಸಭಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಲ್ಪಸಂಖ್ಯಾತ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳು "ಮೀಸಲಾತಿಯಿಂದ ವಂಚಿತರಾಗಲು" ಆರ್‌ಜೆಡಿ ಮತ್ತು ಕಾಂಗ್ರೆಸ್ ಕಾರಣ ಎಂದು ಆರೋಪಿಸಿದರು. ಅಲ್ಲದೆ ದಲಿತರು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ದೋಚುವ ಇಂಡಿಯಾ ಮೈತ್ರಿಕೂಟದ ಪ್ರಯತ್ನಗಳನ್ನು ತಡೆಯುವುದಾಗಿ ಹೇಳಿದರು.
"ಸಾಮಾಜಿಕ ನ್ಯಾಯದ ಹೋರಾಟಕ್ಕೆ ಹೊಸ ದಿಕ್ಕನ್ನು ನೀಡಿದ ಭೂಮಿ ಬಿಹಾರ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಹಕ್ಕುಗಳನ್ನು ಕಸಿದುಕೊಳ್ಳುವ ಮತ್ತು ಅವುಗಳನ್ನು ಮುಸ್ಲಿಮರಿಗೆ ನೀಡುವ ಇಂಡಿಯಾ ಬಣದ ಯೋಜನೆಯನ್ನು ನಾನು ವಿಫಲಗೊಳಿಸುತ್ತೇನೆ ಎಂದ ಪ್ರಧಾನಿ ಮೋದಿ, ಅವರು ತಮ್ಮ ಮತ ಬ್ಯಾಂಕ್ ಅನ್ನು ಮೆಚ್ಚಿಸಲು 'ಮುಜ್ರಾ' ಮಾಡಬಹುದು" ಎಂದು ಟೀಕಿಸಿದರು.
“ನಾನು ಬಿಹಾರ, ಎಸ್‌ಸಿ/ಎಸ್‌ಟಿ/ಒಬಿಸಿ ಸಮುದಾಯಗಳಿಗೆ ಭರವಸೆ ನೀಡುತ್ತಿದ್ದೇನೆ. ಮೋದಿ ಬದುಕಿರುವವರೆಗೆ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ, ಮೋದಿಗೆ ಸಂವಿಧಾನ ಸರ್ವಶ್ರೇಷ್ಠ, ಮೋದಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವನೆಗಳು ಸರ್ವೋಚ್ಚ. ಇಂಡಿಯಾ ಬಣವು ತಮ್ಮ ಮತ ಬ್ಯಾಂಕ್‌ನ ಜೀತಪದ್ಧತಿಯನ್ನು ಸ್ವೀಕರಿಸಲು ಬಯಸುತ್ತದೆ ಎಂದರು.
ತಮ್ಮ ವೋಟ್ ಬ್ಯಾಂಕ್ ಅನ್ನು ಸಂತೋಷಪಡಿಸಲು ಕಾಂಗ್ರೆಸ್ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಸಂಬಂಧಿಸಿದ ಕಾನೂನನ್ನು ಬದಲಾಯಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



