ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮೂವರು ನಕ್ಸಲರು ಬಲಿ
ಛತ್ತೀಸ್‌ಗಢದ ದಕ್ಷಿಣ ಬಸ್ತಾರ್ ಪ್ರದೇಶದಲ್ಲಿ ಶನಿವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯ್‌ಪುರ/ಬಿಜಾಪುರ: ಛತ್ತೀಸ್‌ಗಢದ ದಕ್ಷಿಣ ಬಸ್ತಾರ್ ಪ್ರದೇಶದಲ್ಲಿ ಶನಿವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ನಕ್ಸಲೀಯರನ್ನು ಹೊಡೆದುರುಳಿಸಲಾಗಿದ್ದು, ಮತ್ತೊಬ್ಬರು ನೆರೆಯ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಬಿಜಾಪುರದಲ್ಲಿ, ಮಿರ್ತೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪೆಮಾರ್ಕ-ಕಮ್ಕನಾರ್ ಗ್ರಾಮಗಳ ಸಮೀಪವಿರುವ ಕಾಡಿನಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆದಿದೆ. ಅಲ್ಲಿ ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾವೋವಾದಿಗಳ ಪಶ್ಚಿಮ ಬಸ್ತಾರ್ ವಿಭಾಗದ ಸರಬರಾಜು ತಂಡದ ಉಸ್ತುವಾರಿ ಪಂಡ್ರು ಮತ್ತು ಭೈರಮ್‌ಗಢ ಪ್ರದೇಶ ಸಮಿತಿ ಸದಸ್ಯ ಜೋಗಾ ಹಾಗೂ ಇತರ 10 ರಿಂದ 15 ಶಸ್ತ್ರಸಜ್ಜಿತ ಮಾವೋವಾದಿಗಳು ಪ್ರದೇಶದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.
ಎನ್ ಕೌಂಟರ್ ನಂತರ ಡಿಆರ್‌ಜಿ ತಂಡ, ಇಬ್ಬರು ನಕ್ಸಲೀಯರ ದೇಹಗಳನ್ನು, ಶಸ್ತ್ರಾಸ್ತ್ರಗಳು, ವೈರ್‌ಲೆಸ್ ಸೆಟ್, ಬ್ಯಾಗ್‌ಗಳು, ಮಾವೋವಾದಿ ಸಮವಸ್ತ್ರ, ಔಷಧಿಗಳು ಮತ್ತು ದೈನಂದಿನ ಬಳಕೆಯ ಸಾಮಗ್ರಿಗಳನ್ನು ಸ್ಥಳದಿಂದ ವಶಪಡಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



