ಮಲಿವಾಲ್ ಪ್ರಕರಣ: ಬಿಭವ್ ಜಾಮೀನು ಅರ್ಜಿ ವಜಾ
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಭವ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ.

ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಭವ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ.
ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೋಮವಾರ ಸಂಜೆಯವರೆಗೆ ಕಾಯ್ದಿರಿಸಿತ್ತು.
ಮೇ 13 ರಂದು ಮುಖ್ಯಮಂತ್ರಿಯವರ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸದಸ್ಯೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕುಮಾರ್ ಅವರನ್ನು ಮೇ 24 ರಂದು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ವಾದಗಳನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



