ದೇಶ

ಪುಣೆ ಪೋರ್ಶೆ ಕಾರು ಅಪಘಾತ: ಸಾಕ್ಷ್ಯ ನಾಶದ ಆರೋಪದ ಮೇಲೆ ಇಬ್ಬರು ವೈದ್ಯರ ಬಂಧನ

ಪುಣೆಯಲ್ಲಿ ನಡೆದ ಪೋರ್ಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಪುಣೆ ಪೋರ್ಶೆ ಕಾರು ಅಪಘಾತ: ಸಾಕ್ಷ್ಯ ನಾಶದ ಆರೋಪದ ಮೇಲೆ ಇಬ್ಬರು ವೈದ್ಯರ ಬಂಧನ
ಪೋರ್ಶೆ ಕಾರು ಅಪಘಾತ
Published On :

ಪುಣೆ: ಪುಣೆಯಲ್ಲಿ ನಡೆದ ಪೋರ್ಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಬಂಧಿತರಲ್ಲಿ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥರೂ ಸೇರಿದ್ದಾರೆ. ಬಂಧಿತರನ್ನು ಡಾ. ಅಜಯ್ ತಾವರೆ ಮತ್ತು ಶ್ರೀಹರಿ ಹಾರ್ನರ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

'ಆರೋಪಿ ಬಾಲಕನ ರಕ್ತ ಮಾದರಿಯನ್ನು ಎಸೆದು ಬದಲಿಗೆ ಬೇರೊಂದು ರಕ್ತದ ಮಾದರಿಯನ್ನು ಇರಿಸಿ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ವೈದ್ಯರನ್ನು ಬಂಧಿಸಲಾಗಿದೆ'. ಸದ್ಯ ಈ ಪ್ರಕರಣವನ್ನು ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 19 ರ ಮುಂಜಾನೆ ಪುಣೆಯ ಉದ್ಯಮಿಯೊಬ್ಬರ ಅಪ್ರಾಪ್ತ ಮಗ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಶೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಐಟಿ ಉದ್ಯೋಗಿಗಳು ಸಾವಿಗೀಡಾಗಿದ್ದರು. ಕಾರು ಚಲಾಯಿಸುವ ವೇಳೆ ಬಾಲಕ ಪಾನಮತ್ತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗೆ ಆರಂಭದಲ್ಲಿ ಬಾಲನ್ಯಾಯ ಮಂಡಳಿಯು ಜಾಮೀನು ನೀಡಿತು ಮತ್ತು ರಸ್ತೆ ಅಪಘಾತಗಳ ಬಗ್ಗೆ ಪ್ರಬಂಧ ಬರೆಯುವಂತೆ ಕೇಳಿತ್ತು. ಸದ್ಯ ಬಾಲಕನನ್ನು ಜೂನ್ 5ರವರೆಗೆ ವೀಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಾಲಕನ ತಂದೆ ಹಾಗೂ ಉದ್ಯಮಿ ವಿಶಾಲ್ ಅಗರ್‌ವಾಲ್, ತಾತ ಸುರೇಂದ್ರ ಅಗರ್‌ವಾಲ್‌ರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.