ದೇಶ

ಬಿಎಲ್ ಸಂತೋಷ್ ಬಂಧನಕ್ಕೆ ಯತ್ನಿಸಿದ್ದ KCR ಬಿಜೆಪಿ ಮೇಲೆ ಒತ್ತಡ ಹೇರಲು ಬಯಸಿದ್ದರು: ತೆಲಂಗಾಣ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಬಹಿರಂಗ!

ತೆಲಂಗಾಣದಲ್ಲಿ ನಡೆದ ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆಯಲ್ಲಿ ಹಲವು ಅಚ್ಚರಿಯ ಅಂಶಗಳು ಬಹಿರಂಗವಾಗತೊಡಗಿದೆ.

ಬಿಎಲ್ ಸಂತೋಷ್ ಬಂಧನಕ್ಕೆ ಯತ್ನಿಸಿದ್ದ KCR ಬಿಜೆಪಿ ಮೇಲೆ ಒತ್ತಡ ಹೇರಲು ಬಯಸಿದ್ದರು: ತೆಲಂಗಾಣ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಬಹಿರಂಗ!
ತೆಲಂಗಾಣ ಸಿಎಂ ಕೆಸಿಆರ್ — online desk
Published On :

ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆಯಲ್ಲಿ ಹಲವು ಅಚ್ಚರಿಯ ಅಂಶಗಳು ಬಹಿರಂಗವಾಗತೊಡಗಿದೆ.

ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ ನ್ನು ಬಂಧನಕ್ಕೊಳಪಡಿಸಿ ಆ ಮೂಲಕ ಬಿಜೆಪಿ ಮೇಲೆ ಒತ್ತಡ ಹೇರಲು ಬಯಸಿದ್ದರು ಎಂಬ ಅಂಶ ಈಗ ಬಹಿರಂಗವಾಗಿದೆ.

ಬಿಎಲ್ ಸಂತೋಷ್ ಬಂಧನಕ್ಕೊಳಗಾದರೆ, ದೆಹಲಿ ಮದ್ಯ ನೀತಿ ಹಗರಣದಲ್ಲಿ ಭಾಗಿಯಾಗಿ ಜಾರಿ ನಿರ್ದೇಶನಾಲಯದ ಬಂಧನಕ್ಕೊಳಗಾಗಿದ್ದ ತಮ್ಮ ಪುತ್ರಿ ಕೆ.ಕವಿತಾ ಅವರನ್ನು ಬಿಡುಗಡೆ ಮಾಡುವಂತೆ ಬಿಜೆಪಿ ಮೇಲೆ ಒತ್ತಡ ಹೇರಬಹುದು ಎಂಬುದು ಚಂದ್ರಶೇಖರ್ ರಾವ್ ಅವರ ಲೆಕ್ಕಾಚಾರವಾಗಿತ್ತು ಎಂದು ತಿಳಿದುಬಂದಿದೆ. ಈ ಆರೋಪಗಳನ್ನು ಪೊಲೀಸ್ ಇಲಾಖೆಯ ಮಾಜಿ ಉಪ ಆಯುಕ್ತ ಪಿ ರಾಧಾಕೃಷ್ಣ ರಾವ್ 6 ಪುಟಗಳ ತಪ್ಪೊಪ್ಪಿಗೆಯಲ್ಲಿ ಬಹಿರಂಗಪಡಿಸಿದ್ದಾರೆ.

ಮಾರ್ಚ್ ನಲ್ಲಿ ಹೈದರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿ ಪಿ ರಾಧಾಕೃಷ್ಣ ರಾವ್ ಅವರನ್ನು ಬಂಧನಕ್ಕೆ ಒಳಪಡಿಸಲಾಗಿತ್ತು. ಸಿಎಂ (ಚಂದ್ರಶೇಖರ್ ರಾವ್) ಹಾಗೂ ಅವರ ಆಪ್ತ ವಲಯದ ಆದೇಶದ ಮೇರೆಗೆ, ಬಿಆರ್ ಎಸ್ (ಅಂದಿನ ಟಿಆರ್ ಎಸ್) ಹಾಗೂ ಆ ಪಕ್ಷದ ಸರ್ಕಾರದ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿದ್ದೆ ಎಂದು ತಮ್ಮ ತಪ್ಪೊಪ್ಪಿಗೆಯಲ್ಲಿ ರಾಧಾಕೃಷ್ಣ ರಾವ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.