ಹಿಂದೂ ಮಹಿಳೆಯನ್ನು ಮುಸ್ಲಿಂ ವ್ಯಕ್ತಿ ಮದುವೆ ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ಅಕ್ರಮ: ಹೈಕೋರ್ಟ್
ಮುಸ್ಲಿಂ ಹುಡುಗ ಮತ್ತು ಹಿಂದೂ ಹುಡುಗಿಯ ನಡುವೆ ಮತಾಂತರವಾಗದೆ ವಿವಾಹವಾಗುವುದು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಕಾನೂನುಬಾಹಿರ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಭೋಪಾಲ್: ಮುಸ್ಲಿಂ ಹುಡುಗ ಮತ್ತು ಹಿಂದೂ ಹುಡುಗಿಯ ನಡುವೆ ಮತಾಂತರವಾಗದೆ ವಿವಾಹವಾಗುವುದು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಕಾನೂನುಬಾಹಿರ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ. ಇದರೊಂದಿಗೆ ವಿಶೇಷ ವಿವಾಹ ಕಾಯ್ದೆ-954ರ ಅಡಿಯಲ್ಲಿ ಅಂತರ್ ಧರ್ಮೀಯ ವಿವಾಹ ನೋಂದಣಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಿದ್ದರೂ, ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವನ್ನು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಅಕ್ರಮ ಎಂದು ಪರಿಗಣಿಸಲಾಗುತ್ತದೆ ಎಂದು ನ್ಯಾಯಮೂರ್ತಿ ಜಿಎಸ್ ಅಹ್ಲುವಾಲಿಯಾ ಅವರ ಏಕ ಪೀಠ ಹೇಳಿದೆ. ವಾಸ್ತವವಾಗಿ, ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ವಿಗ್ರಹಾರಾಧಕ ಅಥವಾ ಅಗ್ನಿ ಆರಾಧಕ ಹುಡುಗಿಯೊಂದಿಗೆ ಮುಸ್ಲಿಂ ಹುಡುಗನ ವಿವಾಹವು ಮಾನ್ಯ ವಿವಾಹವಲ್ಲ ಎಂದರು.
ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ಸಾರಿಕಾ ಸೇನ್ ಮತ್ತು ಸಫೀಕ್ ಖಾನ್ ದಂಪತಿಗಳು ಅರ್ಜಿ ಸಲ್ಲಿಸಿದ್ದು, ಇಬ್ಬರೂ ಮದುವೆಯಾಗಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈಗ ಅವರು ತಮ್ಮ ಮದುವೆಯನ್ನು ನೋಂದಾಯಿಸಲು ಬಯಸುತ್ತಾರೆ. ಇವರ ಮದುವೆಗೆ ಮಹಿಳೆಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ಸಮುದಾಯವೂ ಅವರನ್ನು ಬಹಿಷ್ಕರಿಸುವ ಮಾತನ್ನಾಡಿದೆ. ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿರುವುದರಿಂದ ತಹಶೀಲ್ದಾರ ಕಚೇರಿಗೆ ತೆರಳಿ ವಿವಾಹ ನೋಂದಣಿ ಮಾಡಿಕೊಳ್ಳುವಂತೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಕೋರಿದ್ದರು.
ಅರ್ಜಿದಾರರ ಪರವಾಗಿ, ಮಹಿಳೆ ಅಥವಾ ಪುರುಷ ವಿವಾಹಕ್ಕಾಗಿ ಬೇರೆ ಯಾವುದೇ ಧರ್ಮವನ್ನು ಸ್ವೀಕರಿಸಲು ಬಯಸುವುದಿಲ್ಲ ಎಂದು ಹೈಕೋರ್ಟ್‌ಗೆ ತಿಳಿಸಲಾಯಿತು. ಮಹಿಳೆ ಹಿಂದೂ ಧರ್ಮವನ್ನು ಅನುಸರಿಸುವುದನ್ನು ಮುಂದುವರಿಸುತ್ತಾಳೆ. ಆದರೆ ಪುರುಷನು ಮದುವೆಯ ನಂತರವೂ ಇಸ್ಲಾಂ ಧರ್ಮವನ್ನು ಅನುಸರಿಸುತ್ತಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



