ಮತ್ತೊಂದು ಪ್ರಕರಣದಲ್ಲಿ ಅಜಂ ಖಾನ್‌ಗೆ 10 ವರ್ಷಗಳ ಜೈಲು ಶಿಕ್ಷೆ, 14 ಲಕ್ಷ ರೂ. ದಂಡ!

ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಅಜಂ ಖಾನ್‌ಗೆ ರಾಂಪುರ ಸಂಸದ/ಶಾಸಕ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ಮತ್ತು 14 ಲಕ್ಷ ರೂಪಾಯಿ ದಂಡ ವಿಧಿಸಿದೆ. 2016ರಲ್ಲಿ ಎಸ್‌ಪಿ ಸರ್ಕಾರದ ಅವಧಿಯಲ್ಲಿ ರಾಂಪುರದ ಡುಂಗರ್‌ಪುರ ಕಾಲೋನಿ ನಿವಾಸಿಗಳನ್ನು ಬಲವಂತವಾಗಿ ಹೊರಹಾಕಿ, ಲೂಟಿ ಮಾಡಿ, ಬೆದರಿಕೆ ಹಾಕಿದ ಪ್ರಕರಣದಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.
ಕ್ರಿಮಿನಲ್ ಅತಿಕ್ರಮಣ, ಉದ್ದೇಶಪೂರ್ವಕ ಅವಮಾನ, ಕ್ರಿಮಿನಲ್ ಬೆದರಿಕೆ ಮತ್ತು ನೋವುಂಟು ಮಾಡುವ ಕಿಡಿಗೇಡಿತನ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಜಂ ಖಾನ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ರಾಂಪುರ ಪುರಸಭೆಯ ಮಾಜಿ ಅಧ್ಯಕ್ಷ ಅಜರ್ ಅಹಮದ್ ಖಾನ್, ಮಾಜಿ ವೃತ್ತಾಧಿಕಾರಿ ಆಲೆ ಹಸನ್ ಸೇರಿದಂತೆ ಮೂವರಿಗೆ 5 ವರ್ಷ ಜೈಲು ಶಿಕ್ಷೆ ಮತ್ತು 2.5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಡುಂಗರ್‌ಪುರ ಕಾಲೋನಿಯಲ್ಲಿನ ಮನೆಗಳನ್ನು ಅಜಂ ಖಾನ್ ಮತ್ತು ಅವರ ಸಹಚರರು ಸರ್ಕಾರಿ ಆಶ್ರಯ ಮನೆಗಳನ್ನು ನಿರ್ಮಿಸಲು ಕೆಡವಿದ್ದರು ಎಂದು ಆರೋಪಿಸಲಾಗಿದೆ. ಬಲವಂತವಾಗಿ ಮನೆಗಳಿಗೆ ನುಗ್ಗಿ ದಾಳಿ ನಡೆಸಿ ಹಣ ಮತ್ತು ವಸ್ತುಗಳನ್ನು ದೋಚಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಸರ್ಕಾರ ಬದಲಾದ ನಂತರ 2019ರಲ್ಲಿ ಈ ವಿಷಯದಲ್ಲಿ ಎಫ್‌ಐಆರ್ ದಾಖಲಾಗಿತ್ತು.
76ರ ಹರೆಯದ ಮಾಜಿ ಸಚಿವನ ವಿರುದ್ಧ ಕಳೆದ ಎರಡು ವರ್ಷಗಳಲ್ಲಿ ಇದು ಆರನೇ ಪ್ರಕರಣವಾಗಿದ್ದು, ಶಿಕ್ಷೆಗೆ ಗುರಿಯಾಗಿದ್ದಾರೆ. ಆಜಂ ಖಾನ್ ಪ್ರಸ್ತುತ ಮತ್ತೊಂದು ಅಪರಾಧ ಪ್ರಕರಣದಲ್ಲಿ ಸೀತಾಪುರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



