ದೇಶ

ಒಡಿಶಾ: ಮಾವಿನಹಣ್ಣಿನ ಬೀಜದಿಂದ ತಯಾರಿಸಿದ ಆಹಾರ ಸೇವಿಸಿ ಇಬ್ಬರು ಸಾವು; 6 ಮಂದಿ ಸ್ಥಿತಿ ಗಂಭೀರ

ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಎಲ್ಲ ಗಂಭೀರವಾವಾಗಿ ಅಸ್ವಸ್ಥರಾದವರನ್ನು ಬ್ರಹ್ಮಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟವರು ಇಬ್ಬರು ಮಹಿಳೆಯರು ಎಂದು ತಿಳಿದು ಬಂದಿದೆ.

ಒಡಿಶಾ: ಮಾವಿನಹಣ್ಣಿನ ಬೀಜದಿಂದ ತಯಾರಿಸಿದ ಆಹಾರ ಸೇವಿಸಿ ಇಬ್ಬರು ಸಾವು; 6 ಮಂದಿ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
Published On :

ಒಡಿಶಾ: ಮಾವಿನ ಗೊರಟೆಯಿಂದ ಮಾಡಿದ ಗಂಜಿ ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟು, ಆರು ಮಂದಿ ಅಸ್ವಸ್ಥಗೊಂಡಿರುವ ಘಟನೆ ಒಡಿಶಾದ ಕಂಧಮಲ್ ಜಿಲ್ಲೆಯಲ್ಲಿ ನಡೆದಿದೆ. ದರಿಂಗ್‌ಬಾಡಿ ಬ್ಲಾಕ್‌ನ ಮಂಡಿಪಂಕ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಎಲ್ಲ ಗಂಭೀರವಾವಾಗಿ ಅಸ್ವಸ್ಥರಾದವರನ್ನು ಬ್ರಹ್ಮಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟವರು ಇಬ್ಬರು ಮಹಿಳೆಯರು ಎಂದು ತಿಳಿದು ಬಂದಿದೆ. ಮಾಹಿತಿ ಪ್ರಕಾರ, ಮೃತರು ಹಾಗೂ ಅಸ್ವಸ್ಥರು ಮಾವಿನ ಬೀಜದಿಂದ ತಯಾರಿಸಿದ ಸ್ಥಳೀಯ ಆಹಾರ ಪದಾರ್ಥವನ್ನು ಸೇವಿಸಿದ್ದಾರೆ. ಸೇವಿಸಿದ ಸ್ವಲ್ಪ ಸಮಯದ ನಂತರ ಅವರೆಲ್ಲರೂ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ.

ವಿಷಯ ತಿಳಿದ ಗ್ರಾಮಸ್ಥರು ತಕ್ಷಣ ಅವರನ್ನು ಮೊದಲು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಸ್ಥಿತಿ ಗಂಭೀರವಾಗಿದ್ದರಿಂದ 6 ಮಂದಿಯನ್ನು ಬ್ರಹ್ಮಪುರಕ್ಕೆ ಸ್ಥಳಾಂತರಿಸಲಾಗಿದೆ. ಒಬ್ಬ ಮಹಿಳೆ ಆರೋಗ್ಯ ಕೇಂದ್ರದಲ್ಲಿ ಸಾವನ್ನಪ್ಪಿದರೆ, ಇನ್ನೊಬ್ಬ ಮಹಿಳೆ ಆಂಬ್ಯುಲೆನ್ಸ್‌ನಲ್ಲಿ ಬ್ರಹ್ಮಪುರಕ್ಕೆ ಸ್ಥಳಾಂತರಿಸುವಾಗ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಆಡಳಿತ ಈ ಬಗ್ಗೆ ತನಿಖೆ ಪ್ರಾರಂಭಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.