ದೇಶ

ಜಮ್ಮು-ಕಾಶ್ಮೀರ: ಶ್ರೀನಗರ ಎನ್‌ಕೌಂಟರ್‌ನಲ್ಲಿ ಇಬ್ಬರು CRPF ಯೋಧರು, ಇಬ್ಬರು ಪೊಲೀಸರಿಗೆ ಗಾಯ

ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಬೆಳಿಗ್ಗೆ ಖನ್ಯಾರ್‌ನಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಇದು ಎನ್ ಕೌಂಟರ್ ಗೆ ತಿರುಗಿದ್ದು, ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಹೀಗಾಗಿ ಪ್ರತಿದಾಳಿ ನಡೆಸಲಾಗಿದೆ

ಜಮ್ಮು-ಕಾಶ್ಮೀರ: ಶ್ರೀನಗರ ಎನ್‌ಕೌಂಟರ್‌ನಲ್ಲಿ ಇಬ್ಬರು CRPF ಯೋಧರು, ಇಬ್ಬರು ಪೊಲೀಸರಿಗೆ ಗಾಯ
ಭದ್ರತಾ ಪಡೆಗಳು
Published On :

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ಶನಿವಾರ ನಡೆದ ಉಗ್ರರ ಜೊತೆಗಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಮತ್ತು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಬೆಳಿಗ್ಗೆ ಖನ್ಯಾರ್‌ನಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಇದು ಎನ್ ಕೌಂಟರ್ ಗೆ ತಿರುಗಿದ್ದು, ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಹೀಗಾಗಿ ಪ್ರತಿದಾಳಿ ನಡೆಸಲಾಗಿದೆ ಎಂದು ಅವರು ಹೇಳಿದರು.

ಗುಂಡಿನ ಚಕಮಕಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಮತ್ತು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಸೇನೆಯ 92 ಮೂಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಕಡೆ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶಾಂಗಸ್-ಲರ್ನೂ ಪ್ರದೇಶದ ಹಲ್ಕನ್ ಗಲಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.