ಗುಜರಾತ್ನಲ್ಲಿ 3.4 ತೀವ್ರತೆಯ ಭೂಕಂಪನ
ಭೂಕಂಪನದಿಂದಾಗಿ ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ನಷ್ಟ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಹ್ಮದಾಬಾದ್ (ಗುಜರಾತ್): ಗುಜರಾತ್ ರಾಜ್ಯದ ಕಚ್ ಜಿಲ್ಲೆ ಹಲವು ಗ್ರಾಮಗಳಲ್ಲಿ ಭಾನುವಾರ ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ಇಂದು ಬೆಳಿಗ್ಗೆ ಭೂ ಕಂಪನದ ಅನುಭವವಾದ ತಕ್ಷಣ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.
ಭೂಕಂಪನದಿಂದಾಗಿ ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ನಷ್ಟ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಂಪನವು ಇಂದು ಮುಂಜಾನೆ 3.58 ಕ್ಕೆ ದಾಖಲಾಗಿದ್ದು, ಭೂಕಂಪನದ ಕೇಂದ್ರಬಿಂದು ಲಖ್ಪತ್‌ನ ಉತ್ತರ-ಈಶಾನ್ಯಕ್ಕೆ 53 ಕಿಮೀ ದೂರದಲ್ಲಿದೆ ಎಂದು ತಿಳಿದ್ದಾರೆ.
ಇದಕ್ಕೂ ಮೊದಲು ಅಕ್ಟೋಬರ್ 27 ರಂದು, ಅಮ್ರೇಲಿ ಜಿಲ್ಲೆಯ ಸವರ್ ಕುಂಡ್ಲಾ ಮತ್ತು ಸಮೀಪದ ಗ್ರಾಮಗಳಲ್ಲಿ 3.7 ತೀವ್ರತೆಯ ಭೂಕಂಪನದ ಸಂಭವಿಸಿತ್ತು.
ಗುಜರಾತ್ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (GSDMA) ನೀಡಿರುವ ಮಾಹಿತಿಯ ಪ್ರಕಾರ, ಕಳೆದ 200 ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು ಒಂಬತ್ತು ಪ್ರಮುಖ ಭೂಕಂಪಗಳು ಎದುರಾಗಿತ್ತು ಎಂದು ತಿಳಿಸಿದೆ.
2001 ರಲ್ಲಿ ಕಚ್'ನಸ್ಸಿ ಸಂಭವಿಸಿದ್ದ ಭೂಕಂಪವು ಕಳೆದ ಎರಡು ಶತಮಾನಗಳಲ್ಲಿ ಭಾರತದಲ್ಲಿ ಮೂರನೇ ಅತಿದೊಡ್ಡ ಮತ್ತು ಎರಡನೇ ಅತ್ಯಂತ ವಿನಾಶಕಾರಿ ಭೂಕಂಪವಾಗಿದೆ ಎಂದು ಅದು ಹೇಳಿದೆ.
ಜನವರಿ 26, 2001 ರಂದು, ಗುಜರಾತ್ ಕಚ್‌ನ ಭಚೌ ಬಳಿ 6.9 ತೀವ್ರತೆಯ ಭೂಕಂಪನವಾಗಿತ್ತು, ಇದು ಇಡೀ ರಾಜ್ಯದ ಮೇಲೆ ಪರಿಣಾಮ ಬೀರಿತ್ತು. ಜಿಎಸ್‌ಡಿಎಂಎ ಅಂಕಿಅಂಶಗಳ ಪ್ರಕಾರ ಈ ಭೂಕಂಪದಲ್ಲಿ 13,800 ಜನರು ಬಲಿಯಾಗಿದ್ದರು. ಅಳ್ಲದೆ, 1.67 ಲಕ್ಷ ಜನರು ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



