Maharashtra Elections: ಐವರು ಬಂಡಾಯ ನಾಯಕರ ಉಚ್ಚಾಟಿಸಿದ ಉದ್ಧವ್ ಠಾಕ್ರೆ
ಈ ಚುನಾವಣೆಯಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣ ಮಹಾವಿಕಾಸ್ ಅಘಾಡಿ ಮೈತಿಕೂಟದಿಂದ ಕಣಕ್ಕಿಳಿದಿದ್ದು, ಮೈತ್ರಿ ಅಭ್ಯರ್ಥಿಗಳನ್ನು ಇಲ್ಲಿ ಕಣಕ್ಕಿಳಿಸಲಾಗಿದೆ.

ಮುಂಬೈ: ಮಹಾರಾಷ್ಟ್ರ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಶಿವಸೇನೆ ಉದ್ಧವ್ ಠಾಕ್ರೆ ಬಣದಲ್ಲಿ ಬಂಡಾಯದ ಬಿಸಿ ಜೋರಾಗಿದ್ದು, ಐವರು ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಹೌದು.. ಮಹಾರಾಷ್ಟ್ರ ಚುನಾವಣೆಯಲ್ಲಿ ನಾಮಪತ್ರ ಹಿಂತೆಗೆದುಕೊಳ್ಳದ ಐವರು ಬಂಡಾಯ ನಾಯಕರನ್ನು ಶಿವಸೇನೆ ಉದ್ಧವ್ ಠಾಕ್ರೆ ಬಣ ಉಚ್ಚಾಟಿಸಿದೆ. ಭಿವಂಡಿ ಮಾಜಿ ಶಾಸಕ ರೂಪೇಶ್ ಮ್ಹಾತ್ರೆ, ವಿಶ್ವಾಸ್ ನಾಂದೇಕರ್, ಚಂದ್ರಕಾಂತ್ ಘುಗುಲ್, ಸಂಜಯ್ ಅವರಿ ಮತ್ತು ಪ್ರಸಾದ್ ಠಾಕ್ರೆ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಚುನಾವಣೆಯಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣ ಮಹಾವಿಕಾಸ್ ಅಘಾಡಿ ಮೈತಿಕೂಟದಿಂದ ಕಣಕ್ಕಿಳಿದಿದ್ದು, ಮೈತ್ರಿ ಅಭ್ಯರ್ಥಿಗಳನ್ನು ಇಲ್ಲಿ ಕಣಕ್ಕಿಳಿಸಲಾಗಿದೆ. ಕೆಲ ಕ್ಷೇತ್ರಗಳಲ್ಲಿ ಟಿಕೆಟ್ ಗೊಂದಲವಿದ್ದು, ಪ್ರತಿಪಕ್ಷದ ಮಹಾ ವಿಕಾಸ್ ಅಘಾಡಿ ಬಂಡಾಯ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಒಂದು ಗಂಟೆಯ ಸಮಯ ನೀಡಿದ ಹೊರತಾಗಿಯೂ ಅವರು ನಾಮಪತ್ರ ವಾಪಸ್ ಪಡೆಯದ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಲು ವಿಫಲರಾದ ಬಂಡಾಯಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



