ಇನ್ಮುಂದೆ ಯಾವುದೇ ಚುನಾವಣೆಗೂ ಸ್ಪರ್ಧಿಸಲ್ಲ: ಶರದ್ ಪವಾರ್
ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು ಇಂದು ಬಾರಾಮತಿಯಲ್ಲಿ ತಮ್ಮ ಮೊಮ್ಮಗ ಯುಗೇಂದ್ರ ಪವಾರ್ ಅವರ ಪರ ಚುನಾವಣಾ ಪ್ರಚಾರ ನಡೆಸಿದರು.

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎಸ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಮಹತ್ವದ ಘೋಷಣೆ ಮಾಡಿದ್ದು, ತಮ್ಮ ರಾಜ್ಯಸಭಾ ಸದಸ್ಯತ್ವದ ಅವಧಿ ಮುಕ್ತಾಯಗೊಳ್ಳುತ್ತಿರುವ ಕಾರಣ ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
"ನಾನು 14 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಮತ್ತು ನನ್ನ ರಾಜ್ಯಸಭಾ ಅಧಿಕಾರಾವಧಿ ಪೂರ್ಣಗೊಂಡ ನಂತರ ನಾನು ನನ್ನ ಸಂಸದ ಸ್ಥಾನ ಉಳಿಸಿಕೊಳ್ಳಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಯೋಚಿಸುತ್ತಿದ್ದೇನೆ" ಎಂದು ಶರದ್ ಪವಾರ್ ತಿಳಿಸಿದ್ದಾರೆ.
ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು ಇಂದು ಬಾರಾಮತಿಯಲ್ಲಿ ತಮ್ಮ ಮೊಮ್ಮಗ ಯುಗೇಂದ್ರ ಪವಾರ್ ಅವರ ಪರ ಚುನಾವಣಾ ಪ್ರಚಾರ ನಡೆಸಿದರು. ಮೂರು ಬಾರಿ ಮುಖ್ಯಮಂತ್ರಿಯಾಗಿರುವ ಶರದ್ ಪವಾರ್ ಅವರು, ಹೊಸ ಪೀಳಿಗೆಗೆ ಜವಾಬ್ದಾರಿಯನ್ನು ಹಸ್ತಾಂತರಿಸುವ ಅಗತ್ಯವನ್ನು ಒತ್ತಿ ಹೇಳಿದರು ಮತ್ತು ಜನರ ಸೇವೆಯನ್ನು ಮುಂದುವರಿಸಲು ಯಾವುದೇ ಚುನಾವಣೆಯಲ್ಲಿ ಗೆಲ್ಲುವ ಅಗತ್ಯವಿಲ್ಲ ಎಂದರು.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶರದ್ ಪವಾರ್ ಅವರು, ರಾಜ್ಯಸಭಾ ಸದಸ್ಯನಾಗಿ ಮುಂದುವರೆಯುವ ಆಸಕ್ತಿ ಇಲ್ಲ ಎಂದು ಒತ್ತಿ ಹೇಳಿದರು. "ನನ್ನ ಅವಧಿ ಇನ್ನೂ ಒಂದೂವರೆ ವರ್ಷ ಉಳಿದಿದೆ. ನಾನು ಈಗಾಗಲೇ 14 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ. ಇನ್ನೂ ಎಷ್ಟು ಚುನಾವಣೆಗಳಲ್ಲಿ ಸ್ಪರ್ಧಿಸಬೇಕು? ನಾನು ಈಗ ಹೊಸ ಪೀಳಿಗೆಗೆ ಅವಕಾಶ ನೀಡಬೇಕು ಎಂದು ಭಾವಿಸಿದ್ದೇನೆ ಎಂದರು.
“ನಾನು ಲೋಕಸಭೆ ಚುನಾವಣೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಇಲ್ಲಿಯವರೆಗೆ 14 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ ಮತ್ತು ಯಾವುದೇ ಚುನಾವಣೆಯಲ್ಲೂ ನೀವು ನನ್ನನ್ನು ಮನೆಗೆ ಹೋಗಲು ಬಿಡಲಿಲ್ಲ. ಪ್ರತಿ ಬಾರಿ ನೀವು ನನ್ನನ್ನು ಗೆಲ್ಲಿಸಿದ್ದೀರಿ. ಆದರೆ ಈಗ ಹೊಸ ಪೀಳಿಗೆಗೆ ಅವಕಾಶ ನೀಡಬೇಕು. ನನಗೆ ಅಧಿಕಾರ ಬೇಡ. ಆದರೆ ನಾನು ಜನರ ಸೇವೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



