ಜಾನಪದ ಗಾಯಕಿ -ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ನಿಧನ: ಪಿಎಂ ಮೋದಿ ಸೇರಿದಂತೆ ಗಣ್ಯರ ಸಂತಾಪ
72 ವಯಸ್ಸಿನ ಖ್ಯಾತ ಗಾಯಕಿ ಶಾರದಾ ಅವನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅಕ್ಟೋಬರ್ 25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನವದೆಹಲಿ: ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ಅವರು ಕ್ಯಾನ್ಸರ್‌ನಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.
72 ವಯಸ್ಸಿನ ಖ್ಯಾತ ಗಾಯಕಿ ಶಾರದಾ ಅವನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅಕ್ಟೋಬರ್.25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2017 ರಲ್ಲಿ ಅವರಿಗೆ ಮಲ್ಟಿಪಲ್ ಮೈಲೋಮಾ ರೋಗನಿರ್ಣಯ ದೃಢಪಟ್ಟಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಸಿನ್ಹಾ ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿತ್ತು.
‘ಕಾರ್ತಿಕ್ ಮಾಸ್ ಇಜೋ ರಿಯಾ’, ‘ಕೋಯಲ್ ಬಿನ್’ ತರಹದ ಜನಪದ ಗೀತೆಗಳು, ‘ಗ್ಯಾಂಗ್ಸ್ ಆಫ್ ವಸೇಪುರ್’ ಹಿಂದಿ ಸಿನಿಮಾದ ‘ತಾರ್ ಬಿಜಿಲಿ’, ‘ಹಮ್ ಆಪ್ಕೆ ಹೈ ಕೌನ್’ ಚಿತ್ರದ ‘ಬಾಬುಲ್’ ಹಾಡುಗಳ ಗಾಯನದಿಂದ ಶಾರದಾ ಅವರು ಛಾಪು ಮೂಡಿಸಿದ್ದರು. ಶಾರದಾ ಅವರನ್ನು ಅಭಿಮಾನಿಗಳು ‘ಬಿಹಾರಿ ಕೋಕಿಲಾ’ ಎಂದು ಕರೆಯುತ್ತಿದ್ದರು.
ಶಾರದಾ ಅವರು ಭೋಜಪುರಿ, ಮೈಥಿಲಿ ಭಾಷೆಯ ಜನಪದ ಗೀತೆಗಳನ್ನು ಹಾಡುತ್ತಿದ್ದರು. ಶಾರದಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ ಜೀ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಮೈಥಿಲಿ ಮತ್ತು ಭೋಜ್‌ಪುರಿ ಜಾನಪದ ಹಾಡುಗಳು ಹಲವು ದಶಕಗಳಿಂದ ಜನಪ್ರಿಯವಾಗಿವೆ. ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂತಾಪಗಳು’ ಎಂದು ಪ್ರಧಾನಿ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



