ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಕೇಂದ್ರ ಸರ್ಕಾರ ಕಠಿಣ ಕ್ರಮ; ತ್ಯಾಜ್ಯ ಸುಡುವ ರೈತರಿಗೆ ದುಪ್ಪಟ್ಟು ದಂಡ!
ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು ಈಗ 5,000 ರೂ. ದಂಡ ಪಾವತಿಸಬೇಕಾಗುತ್ತದೆ.

ನವದೆಹಲಿ: ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಮತ್ತು ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ, ಕೃಷಿ ತ್ಯಾಜ್ಯ ಸುಡುವ ರೈತರಿಗೆ ವಿಧಿಸುವ ದಂಡದ ಪ್ರಮಾಣವನ್ನು ದುಪ್ಪಟ್ಟುಗೊಳಿಸಿದೆ.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನವೆಂಬರ್ 6 ರಂದು ರಾಷ್ಟ್ರ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಯು ಗುಣಮಟ್ಟ ನಿರ್ವಹಣೆಗಾಗಿ ಅಧಿಸೂಚನೆ ಹೊರಡಿಸಿದ್ದು, ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ ರೈತರು 30,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದೆ.
ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು ಈಗ 5,000 ರೂ. ದಂಡ ಪಾವತಿಸಬೇಕಾಗುತ್ತದೆ. ಎರಡರಿಂದ ಐದು ಎಕರೆ ಹೊಂದಿರುವವರು 10,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ ಮತ್ತು ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವ ರೈತರು ಭತ್ತದ ತ್ಯಾಜ್ಯವನ್ನು ಸುಟ್ಟರೆ 30,000 ರೂ. ಪಾವತಿಸಬೇಕಾಗುತ್ತದೆ.
ಈ ಹಿಂದೆ ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ 2,500 ರೂ., ಎರಡರಿಂದ ಐದು ಎಕರೆ ಹೊಂದಿರುವವರಿಗೆ 5,000 ರೂ. ಮತ್ತು ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು ಹುಲ್ಲು ಸುಟ್ಟರೆ 15,000 ರೂ. ದಂಡ ವಿಧಿಸಲಾಗುತ್ತಿತ್ತು.
ಪಂಜಾಬ್ ಮತ್ತು ಹರಿಯಾಣದಲ್ಲಿ ಕೃಷಿ ತ್ಯಾಜ್ಯಗಳನ್ನು ಸುಡುವ ಘಟನೆಗಳ ಸಂಖ್ಯೆಯು ಹೆಚ್ಚಾದರೆ ನವೆಂಬರ್ 1 ರಿಂದ 15 ರವರೆಗೆ ದೆಹಲಿಯು ಗರಿಷ್ಠ ಮಟ್ಟದ ಮಾಲಿನ್ಯವನ್ನು ಅನುಭವಿಸುತ್ತದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (DPCC) ವಿಶ್ಲೇಷಣೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



