ದೇಶ

ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಯಾವಾಗಲೂ ಹುಸಿಯಾಗಿವೆ- ಶಿವಸೇನೆ ನಾಯಕಿ

ಮಹಾ ವಿಕಾಸ್ ಅಘಾಡಿ (MVA) ಕುಟುಂಬದ ಒಬ್ಬ ಮಹಿಳೆಗೆ ತಿಂಗಳಿಗೆ 3,000 ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು.

ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಯಾವಾಗಲೂ ಹುಸಿಯಾಗಿವೆ- ಶಿವಸೇನೆ ನಾಯಕಿ
ಎಐಸಿಸಿ ಅಧ್ಯಕ್ಷ ಖರ್ಗೆ, ರಾಹುಲ್ ಗಾಂಧಿ ಮತ್ತಿತರರು
Published On :

ಮುಂಬೈ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಮಹಾರಾಷ್ಟ್ರ ಚುನಾವಣಾ ಅಖಾಡದಲ್ಲೂ ಸದ್ದು ಮಾಡುತ್ತಿವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಯಾವಾಗಲೂ ಹುಸಿಯಾಗುತ್ತಿವೆ ಎಂದು ಶಿವಸೇನೆ ನಾಯಕಿ ಮನಿಶಾ ಕಯಾಂಡೆ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ತೆಲಂಗಾಣ, ಹಿಮಾಚಲ ಸೇರಿದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವ ಬೇರೆ ಬೇರೆ ರಾಜ್ಯಗಳಲ್ಲಿ ಮಹಿಳೆಯರಿಗೆ ಸ್ವಲ್ಪ ಹಣ ನೀಡುವ ಯೋಜನೆ ಕುರಿತು ಮಾತನಾಡಿದ ಮನಿಶಾ ಕಯಾಂಡೆ, ಕರ್ನಾಟಕದಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿ ರೂ. 2,000, ತೆಲಂಗಾಣದಲ್ಲಿ 'ಮಹಾಲಕ್ಷ್ಮಿ ಯೋಜನೆಯಡಿ 1,500 ರೂ. ಮತ್ತು ಹಿಮಾಚಲ ಪ್ರದೇಶದಲ್ಲಿ ಮಹಿಳೆಯರಿಗೆ ರೂ.1,500 ನೀಡುತ್ತಿರುವುದಾಗಿ ಕಾಂಗ್ರೆಸ್ ನವರು ಹೇಳಿಕೊಳ್ಳುತ್ತಿದ್ದಾರೆ. ಇವುಗಳನ್ನು ನಿಲ್ಲಿಸಿದರೆ ಅವರ ಎಲ್ಲಾ ಐದು ಗ್ಯಾರಂಟಿಗಳು ಸುಳ್ಳಾಗಲಿವೆ ಎಂದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (MVA) ಕುಟುಂಬದ ಒಬ್ಬ ಮಹಿಳೆಗೆ ತಿಂಗಳಿಗೆ ರೂ.3,000 ನೀಡುವ ಮಹಾಲಕ್ಷ್ಮಿ ಯೋಜನೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಹಾಲಕ್ಷ್ಮಿ ಹಾಗೂ ಉಚಿತ ಬಸ್ ಪ್ರಯಾಣದ ಯೋಜನೆಯನ್ನು ಘೋಷಿಸಿದ್ದರು.

ಜೊತೆಗೆ ರೂ. 3 ಲಕ್ಷವರೆಗಿನ ಎಲ್ಲಾ ರೈತರ ಕೃಷಿ ಸಾಲ ಮನ್ನಾ,ಜಾತಿ ಆಧಾರಿತ ಸಮೀಕ್ಷೆ, ಎಲ್ಲಾ ಕುಟುಂಬಗಳಿಗೆ ರೂ. 25 ಲಕ್ಷ ಆರೋಗ್ಯ ವಿಮೆ ಯೋಜನೆ, ಯುವ ಜನತೆಗೆ ತಿಂಗಳಿಗೆ ರೂ.4,000 ಆರ್ಥಿಕ ನೆರವು ನೀಡುವ ಯೋಜನೆಯನ್ನು ಕಾಂಗ್ರೆಸ್ ಘೋಷಿಸಿದೆ.

ನವೆಂಬರ್ 20 ರಂದು 288 ಕ್ಷೇತ್ರದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ 23 ರಂದು ಮತ ಎಣಿಕೆ ಘೋಷಣೆಯಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.