ಬಿಹಾರ: ರೈಲು ಬೋಗಿ ಜೋಡಣೆ ನಡುವೆ ಸಿಲುಕಿ ಕಾರ್ಮಿಕ ನಜ್ಜುಗುಜ್ಜು; ಸಾವು
ಈ ಭಯಾನಕ ಘಟನೆಯನ್ನು ನೋಡಿದ ಪ್ರಯಾಣಿಕರು ಕೂಗುತ್ತಿದ್ದಂತೆಯೇ, ರೈಲು ಚಾಲಕ ರೈಲಿನಿಂದ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಬಿಹಾರ: ರೈಲು ಬೋಗಿ ಜೋಡಿಸುವಾಗ ಸಂಭವಿಸಿದ ಅಪಘಾತದಿಂದಾಗಿ ರೈಲ್ವೆ ಪೋರ್ಟರ್ ಒಬ್ಬರು ಮೃತಪಟ್ಟಿರುವ ಘಟನೆ ಬಿಹಾರದ ಗುಸರಾಯ್‌ನ ಬರೌನಿ ಜಂಕ್ಷನ್‌ನಲ್ಲಿ ಶನಿವಾರ ನಡೆದಿದೆ. ಮೃತನನ್ನು ಅಮರ್ ಕುಮಾರ್ ರಾವ್ ಎಂದು ಗುರುತಿಸಲಾಗಿದೆ. ಈತ ಸೊನಾಪುರ ರೈಲ್ವೆ ವಲಯ ವ್ಯಾಪ್ತಿಯ ನಿಲ್ದಾಣದಲ್ಲಿ ಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಲಕ್ನೋ-ಬರೌನಿ ಎಕ್ಸ್‌ಪ್ರೆಸ್ (ಸಂಖ್ಯೆ: 15204) ಲಕ್ನೋ ಜಂಕ್ಷನ್‌ನಿಂದ ಆಗಮಿಸುತ್ತಿದ್ದಂತೆ ಬರೌನಿ ಜಂಕ್ಷನ್‌ನ 5 ನೇ ಪ್ಲಾಟ್‌ಫಾರ್ಮ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾವ್ ಸಾವನ್ನಪ್ಪಿದ್ದಾರೆ. ರೈಲಿನ ಬೋಗಿ ಜೋಡಿಸುವಾಗ ರೈಲಿನ ಇಂಜಿನ್ ಅನಿರೀಕ್ಷಿತವಾಗಿ ಹಿಮ್ಮುಖವಾಗಿ ಚಲಿಸಿದ್ದು, ಬೋಗಿಗಳ ನಡುವೆ ಅವರು ಸಿಲುಕಿ ನಜ್ಜುಗುಜ್ಜಾಗಿ ಸಾವನ್ನಪ್ಪಿರುವುದಾಗಿ ಮೂಲಗಳು ತಿಳಿಸಿವೆ.
ಈ ಭಯಾನಕ ಘಟನೆಯನ್ನು ನೋಡಿದ ಪ್ರಯಾಣಿಕರು ಕೂಗುತ್ತಿದ್ದಂತೆಯೇ, ರೈಲು ಚಾಲಕ ರೈಲಿನಿಂದ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಈ ಅಪಘಾತದ ಭಯಾನಕ ದೃಶ್ಯಗಳನ್ನು ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಎರಡು ಬೋಗಿಗಳ ನಡುವೆ ರಾವ್ ಸಿಲುಕಿರುವುದು ಕಂಡುಬಂದಿದೆ. ಈ ಸಂಬಂಧ ರೈಲ್ವೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



