ದೇಶ

KSRTC Volvo bus: ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ ಸೇವೆ, ಇಲ್ಲಿದೆ ಮಾಹಿತಿ!

ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರ ಬಹುದಿನಗಳ ಕನಸು ಕೊನೆಗೂ ನನಸಾಗಿದ್ದು, ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ ಹೊಸ ವೋಲ್ವೋ ಬಸ್ ಸೇವೆ ಆರಂಭಿಸಿದೆ.

KSRTC Volvo bus: ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ ಸೇವೆ, ಇಲ್ಲಿದೆ ಮಾಹಿತಿ!
ಕೆಎಸ್ ಆರ್ ಟಿಸಿ ಮತ್ತು ಶಬರಿಮಲೆ
Published On :

ಬೆಂಗಳೂರು: ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರಿಗೆ KSRTC ಸಿಹಿಸುದ್ದಿ ನೀಡಿದ್ದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ Volvo bus ಸೇವೆ ಆರಂಭಿಸುತ್ತಿದೆ.

ಹೌದು.. ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರ ಬಹುದಿನಗಳ ಕನಸು ಕೊನೆಗೂ ನನಸಾಗಿದ್ದು, ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ ಹೊಸದಾಗಿ ವೋಲ್ವೋ ಬಸ್ ಸೇವೆ ಆರಂಭಿಸಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಇದೇ ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಿದೆ. ಪ್ರಕಟಣೆಯಲ್ಲಿರುವಂತೆ ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

Story image

ನವೆಂಬರ್ 29 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸೇವೆ ಆರಂಭವಾಗಲಿದೆ. ಅಂದು ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್ ತಲುಪುತ್ತದೆ. ನೀಲಕ್ಕಲ್‌ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಮರುದಿನ ಬೆಳಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ಇನ್ನು ಪ್ರಯಾಣ ದರ ವಯಸ್ಕರಿಗೆ 1,750 ರೂ. ನಿಗದಿಪಡಿಸಲಾಗಿದೆ ಎಂದು ಕೆಎಸ್ಆರ್ ಟಿಸಿ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.