ದೇಶ

ಜಾರ್ಖಂಡ್ ಅಸೆಂಬ್ಲಿ ಚುನಾವಣೆ: ಮೊದಲ ಹಂತದಲ್ಲಿ ಶೇ. 64.86 ರಷ್ಟು ಮತದಾನ

ಇಂದು 43 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಲೋಹರ್ಡಗಾದಲ್ಲಿ ಅತಿ ಹೆಚ್ಚು ಅಂದರೆ ಶೇ. 73.21ರಷ್ಟು ಮತದಾನವಾಗಿದೆ.

ಜಾರ್ಖಂಡ್ ಅಸೆಂಬ್ಲಿ ಚುನಾವಣೆ: ಮೊದಲ ಹಂತದಲ್ಲಿ ಶೇ. 64.86 ರಷ್ಟು ಮತದಾನ
ಮತದಾನ
Published On :

ರಾಂಚಿ: ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಮುಕ್ತಾಯಗೊಂಡಿದ್ದು, ಸಂಜೆ 5 ಗಂಟೆಯವರೆಗೆ ಶೇ. 64.86 ರಷ್ಟು ಮತದಾನವಾಗಿದೆ.

ಇಂದು 43 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಲೋಹರ್ಡಗಾದಲ್ಲಿ ಅತಿ ಹೆಚ್ಚು ಅಂದರೆ ಶೇ. 73.21ರಷ್ಟು ಮತದಾನವಾಗಿದ್ದರೆ, ಹಜಾರಿಬಾಗ್‌ನಲ್ಲಿ ಅತಿ ಕಡಿಮೆ ಅಂದರೆ ಶೇ. 59.13 ರಷ್ಟು ಮತದಾನವಾಗಿದೆ.

ಪ್ರಮುಖ ರಾಜಕೀಯ ನಾಯಕರಾದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್, ಮಾಜಿ ಸಂಸದೆ ಗೀತಾ ಕೋರಾ ಸೇರಿದಂತೆ ಒಟ್ಟು 683 ಅಭ್ಯರ್ಥಿಗಳು ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ.

ಬಿಜೆಪಿ ಮತ್ತು ಇಂಡಿಯಾ ಬ್ಲಾಕ್ ಎರಡೂ ಹೈ-ಪ್ರೊಫೈಲ್ ಅಬ್ಬರದ ಪ್ರಚಾರ ನಡೆಸಿದವು. ಬಿಜೆಪಿ ತನ್ನ 'ರೋಟಿ, ಬೇಟಿ, ಮಾಟಿ' ಅಜೆಂಡಾವನ್ನು ಒತ್ತಿಹೇಳಿತ್ತು ಮತ್ತು ಇಂಡಿಯಾ ಬ್ಲಾಕ್ ಕಲ್ಯಾಣ ಸಾಧನೆಗಳನ್ನು ಎತ್ತಿ ತೋರಿಸುತ್ತ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಟೀಕಿಸಿತ್ತು.

ಜಾರ್ಖಂಡ್ ನಲ್ಲಿ ಎರಡನೇ ಹಂತದ ಮತದಾನವು ನವೆಂಬರ್ 20 ರಂದು ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗುತ್ತದೆ.

ಪ್ರಸ್ತುತ ಬಹುಮತ ಹೊಂದಿರುವ ಜೆಎಂಎಂ ನೇತೃತ್ವದ ಸರ್ಕಾರವು ಅಧಿಕಾರವನ್ನು ಉಳಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಅಧಿಕಾರಕ್ಕೇರುತ್ತದೆಯೇ ಎಂಬುದನ್ನು ಚುನಾವಣಾ ಫಲಿತಾಂಶ ನಿರ್ಧರಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.