ಜಮ್ಮು-ಕಾಶ್ಮೀರ: ಡ್ರಗ್ಸ್ ಹಾವಳಿ; ಪೆಡ್ಲರ್ ಗಳಿಂದ ಡ್ರೋನ್ ಬಳಕೆ!
ಕೆಲವು ದಿನಗಳ ಹಿಂದೆ ಶ್ರೀನಗರದ ಡೌನ್‌ಟೌನ್‌ನ ಸಫಾ ಕಡಲ್ ಪ್ರದೇಶದಲ್ಲಿ ಬೈಕ್ ನಲ್ಲಿ ಚಲಿಸುತ್ತಿದ್ದ ಮೂವರನ್ನು ಪೊಲೀಸರು ತಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀನಗರ: ದೇಶಾದ್ಯಂತ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿರುವಂತೆ ಮಾದಕ ವಸ್ತು ಪೂರೈಕೆ ದಂಧೆಕೋರರು ಡ್ರಗ್ಸ್ ಗಳನ್ನು ಪೂರೈಸಲು ಇತ್ತೀಚೆಗೆ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ, ಗ್ರಾಹಕರ ಚಲನವಲನವನ್ನು ಮೇಲ್ವಿಚಾರಣೆ ಮಾಡಲು ಮತ್ತು ಪೊಲೀಸರ ಚಲನವಲನದ ಮೇಲೆ ನಿಗಾ ಇಡಲು ತಮ್ಮ ವ್ಯಾಪಾರಕ್ಕೆ ಅನುಕೂಲವಾಗಲು ಡ್ರೋನ್‌ಗಳನ್ನು ಬಳಸುತ್ತಿದ್ದ ಮೂವರು ಡ್ರಗ್ ಪೆಡ್ಲರ್‌ಗಳ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಜಮ್ಮು-ಕಾಶ್ಮೀರದ ಡ್ರಗ್ಸ್ ಪೆಡ್ಲರ್‌ಗಳ ವಶದಲ್ಲಿ ಡ್ರೋನ್ ಪತ್ತೆಯಾಗಿರುವುದು ಇದೇ ಮೊದಲು.
ಕೆಲವು ದಿನಗಳ ಹಿಂದೆ ಶ್ರೀನಗರದ ಡೌನ್‌ಟೌನ್‌ನ ಸಫಾ ಕಡಲ್ ಪ್ರದೇಶದಲ್ಲಿ ಬೈಕ್ ನಲ್ಲಿ ಚಲಿಸುತ್ತಿದ್ದ ಮೂವರನ್ನು ಪೊಲೀಸರು ತಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶ್ರೀನಗರದ ನಿವಾಸಿಗಳಾದ ಏಜಾಜ್ ಅಹ್ಮದ್ ಗನಿ, ಓವೈಸ್ ಅಹ್ಮದ್ ಗೊಜ್ರಿ ಮತ್ತು ಮೀರ್ ರೋಮನ್ ಎಂಬ ಮೂವರನ್ನು ಪೊಲೀಸರು ಕೂಲಂಕಷವಾಗಿ ಶೋಧಿಸಿದ್ದಾರೆ.
ಶೋಧದ ಸಮಯದಲ್ಲಿ, ಒಂದು ಬಾಕ್ಸ್‌ನಲ್ಲಿ ಬಚ್ಚಿಟ್ಟ 140 ಕೊಡೈನ್ ಫಾಸ್ಫೇಟ್ ಬಾಟಲಿಗಳು, 38,530 ರೂಪಾಯಿ ನಗದು, 1 ಡ್ರೋನ್ ಮತ್ತು 3 ಸೆಲ್‌ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪೆಡ್ಲರ್‌ಗಳು ಖರೀದಿದಾರರ ಚಲನವಲನವನ್ನು ಮೇಲ್ವಿಚಾರಣೆ ಮಾಡಲು ಡ್ರೋನ್‌ಗಳನ್ನು ಬಳಸುತ್ತಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಡ್ರೋನ್ ಕಣ್ಗಾವಲು ಮೂಲಕ, ಖರೀದಿದಾರರು ಪೊಲೀಸರ ಜೊತೆಗಿಲ್ಲ ಎಂದು ತಿಳಿದುಬಂದಿದೆ. ಮಾದಕ ವಸ್ತುಗಳನ್ನು ಸಾಗಿಸಲು ಡ್ರೋನ್‌ಗಳನ್ನು ಬಳಸಲಾಗಿದೆಯೇ ಎಂಬ ಬಗ್ಗೆ ಭದ್ರತಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಎಲ್ಲಾ ಕೋನಗಳಿಂದ ತನಿಖೆ ಮಾಡಲಾಗುತ್ತಿದೆ. ಡ್ರೋನ್‌ನ ಮೂಲವನ್ನು ಸಹ ಕಂಡುಹಿಡಿಯಲಾಗುತ್ತಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


