ದೇಶ

ಅಕಾಲಿ ದಳ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

"SAD ಅಧ್ಯಕ್ಷ ಎಸ್ ಸುಖ್ಬೀರ್ ಸಿಂಗ್ ಬಾದಲ್ ಅವರು ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡಲು ಇಂದು ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ".

ಅಕಾಲಿ ದಳ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
ಸುಖ್ಬೀರ್ ಸಿಂಗ್ ಬಾದಲ್ (ಸಂಗ್ರಹ ಚಿತ್ರ)
Published On :

ಚಂಡೀಗಢ: ಎರಡೂವರೆ ತಿಂಗಳ ಹಿಂದೆ ಅಕಾಲ್ ತಖ್ತ್‌ನಿಂದ ‘ತಂಖಯಾ’(ಧಾರ್ಮಿಕ ದುಷ್ಕೃತ್ಯದ ಅಪರಾಧಿ) ಎಂದು ಘೋಷಿಸಲ್ಪಟ್ಟ ಶಿರೋಮಣಿ ಅಕಾಲಿದಳ(ಎಸ್‌ಎಡಿ) ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.

"SAD ಅಧ್ಯಕ್ಷ ಎಸ್ ಸುಖ್ಬೀರ್ ಸಿಂಗ್ ಬಾದಲ್ ಅವರು ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡಲು ಇಂದು ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ" ಎಂದು ಪಕ್ಷದ ವಕ್ತಾರ ಡಾ. ದಲ್ಜೀತ್ ಸಿಂಗ್ ಚೀಮಾ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಮ್ಮ ನಾಯಕತ್ವದ ಬಗ್ಗೆ ವಿಶ್ವಸ ವ್ಯಕ್ತಪಡಿಸಿದ್ದಕ್ಕಾಗಿ ಮತ್ತು ಅಧಿಕಾರವಧಿಯುದ್ದಕೂ ಬೆಂಬಲ, ಸಹಕಾರ ನೀಡಿದ ಪಕ್ಷದ ನಾಯಕರು ಕಾರ್ಯಕರ್ತರಿಗೆ ಬಾದಲ್ ಧನ್ಯವಾದ ಹೇಳಿದ್ದಾರೆ ಎಂದು ಚೀಮಾ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು, ಅಕಾಲ್ ತಖ್ತ್ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ಉಪಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಸೇರಿದಂತೆ ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ನಿರ್ಬಂಧಿಸಿತು.

ರಾಜ್ಯದ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20 ರಂದು ಉಪಚುನಾವಣೆ ನಿಗದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.