ಅಸ್ಸಾಂ-ಮಣಿಪುರ ಗಡಿಯಲ್ಲಿ ಮೂರು ಶವಗಳು ಪತ್ತೆ, ಇಂಫಾಲ್ ಕಣಿವೆಯಲ್ಲಿ ಉದ್ವಿಗ್ನ ಪರಿಸ್ಥಿತಿ
ಮಣಿಪುರದ ಜಿರಿಬಾಮ್ ಜಿಲ್ಲೆಯಿಂದ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಕಳೆದ ಸೋಮವಾರ ನಾಪತ್ತೆಯಾಗಿದ್ದರು.

ಗುವಾಹಟಿ: ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಮೆಟೀಸ್ ನ ಆರು ಮಂದಿ ಸದಸ್ಯರು ನಾಪತ್ತೆಯಾದ ನಂತರ ಮಣಿಪುರ-ಅಸ್ಸಾಂ ರಾಜ್ಯಗಳ ಗಡಿಯ ಸಮೀಪ ನಿನ್ನೆ ಶುಕ್ರವಾರ ಮೂರು ಕೊಳೆತ ಶವಗಳು ಪತ್ತೆಯಾಗಿವೆ,
ಮೃತದೇಹಗಳ ಗುರುತು ಇನ್ನೂ ಸಿಕ್ಕಿಲ್ಲ. ನಿನ್ನೆ ಸಂಜೆ ಮರಣೋತ್ತರ ಪರೀಕ್ಷೆಗಾಗಿ ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ತರಲಾಯಿತು. ಮಣಿಪುರದ ಜಿರಿಬಾಮ್ ಜಿಲ್ಲೆಯಿಂದ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಕಳೆದ ಸೋಮವಾರ ನಾಪತ್ತೆಯಾಗಿದ್ದರು. ಜಿರಿಬಾಮ್ ತನ್ನ ಗಡಿಯನ್ನು ಅಸ್ಸಾಂನ ಕ್ಯಾಚಾರ್ ಜಿಲ್ಲೆಯೊಂದಿಗೆ ಹಂಚಿಕೊಂಡಿದ್ದು, ಸಿಲ್ಚಾರ್ ಪ್ರಧಾನ ಕಛೇರಿಯಾಗಿದೆ.
ಉಗ್ರರು ಅಪಹರಿಸಿದ್ದಾರೆ ಎನ್ನಲಾದ ಆರು ಮಂದಿಯನ್ನು ರಕ್ಷಿಸುವಂತೆ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಹೊತ್ತಿನಲ್ಲಿಯೇ ಶವಗಳು ಪತ್ತೆಯಾಗಿರುವ ಸುದ್ದಿ ಹೊರಬಿದ್ದಿದೆ.
ಈ ಘಟನೆಯ ನಂತರ, 13 ನಾಗರಿಕ ಸಮಾಜ ಸಂಘಟನೆಗಳು ಕಳೆದ ಬುಧವಾರ ಇಂಫಾಲ್ ಕಣಿವೆಯಲ್ಲಿ ಬಂದ್ ನಡೆಸಿದ್ದು, ಆರು ವ್ಯಕ್ತಿಗಳ ಬಿಡುಗಡೆಗೆ ಸರ್ಕಾರದ ಮಧ್ಯಸ್ಥಿಕೆಗೆ ಒತ್ತಾಯಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



