ದೆಹಲಿ ಮಾಲಿನ್ಯ: ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನ್ಯಾಯಾಧೀಶರಿಗೆ ಸಿಜೆಐ ಸೂಚನೆ
"ಸಾಧ್ಯವಾದಲ್ಲೆಲ್ಲಾ ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನಾವು ಎಲ್ಲಾ ನ್ಯಾಯಾಧೀಶರಿಗೆ ಹೇಳಿದ್ದೇವೆ" ಎಂದು ಸಿಜೆಐ ತಿಳಿಸಿದರು.

ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾಲಿನ್ಯ ತೀವ್ರ ಅಪಾಯದ ಮಟ್ಟ ತಲುಪಿರುವುದನ್ನು ಗಮನದಲ್ಲಿಟ್ಟುಕೊಂಡು ಸಾಧ್ಯವಿರುವಲ್ಲೆಲ್ಲಾ ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ಎಲ್ಲಾ ನ್ಯಾಯಾಧೀಶರನ್ನು ಸೂಚಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮಂಗಳವಾರ ಹೇಳಿದ್ದಾರೆ.
ಸಿಜೆಐ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠ ಇಂದು ಸಭೆ ಸೇರಿದ ತಕ್ಷಣ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್(ಎಸ್‌ಸಿಬಿಎ) ಅಧ್ಯಕ್ಷ ಕಪಿಲ್ ಸಿಬಲ್ ಸೇರಿದಂತೆ ವಕೀಲರು, ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಹದಗೆಡುತ್ತಿರುವ ಮಾಲಿನ್ಯವನ್ನು ಉಲ್ಲೇಖಿಸಿದರು ಮತ್ತು ಅದನ್ನು ಎದುರಿಸಲು ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿದರು.
"ಸಾಧ್ಯವಾದಲ್ಲೆಲ್ಲಾ ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನಾವು ಎಲ್ಲಾ ನ್ಯಾಯಾಧೀಶರಿಗೆ ಹೇಳಿದ್ದೇವೆ" ಎಂದು ಸಿಜೆಐ ತಿಳಿಸಿದರು.
ಮಾಲಿನ್ಯ ನಿಯಂತ್ರಣಕ್ಕೆ ಬರುತ್ತಿದೆ. ಇನ್ನೂ ಕಡಿಮೆಯಾಗಬೇಕಾಗಿದೆ. ಈ ಸಂದೇಶವು ಇತರ ನ್ಯಾಯಾಲಯಗಳಿಗೆ ಹೋಗಬೇಕು" ಎಂದು ಕಪಿಲ್ ಸಿಬಲ್ ಹೇಳಿದರು.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಗೋಪಾಲ್ ಶಂಕರನಾರಾಯಣನ್ ಸೇರಿದಂತೆ ವಿವಿಧ ವಕೀಲರು ವರ್ಚುವಲ್ ವಿಚಾರಣೆಯನ್ನು ಬೆಂಬಲಿಸಿದರು. ಉನ್ನತ ನ್ಯಾಯಾಲಯವು ತಾತ್ವಿಕವಾಗಿ ವರ್ಚುವಲ್ ವಿಚಾರಣೆ ಹೋಗಬೇಕು ಎಂದು ಸಾಲಿಸಿಟರ್ ಜನರಲ್ ಹೇಳಿದರು.
ಆತಂಕಕಾರಿ ಮಟ್ಟದಲ್ಲಿ ವಾಯು ಮಾಲಿನ್ಯ ಏರಿಕೆಯಾಗುತ್ತಿರುವುದನ್ನು ತಡೆಗಟ್ಟಲು ಕಟ್ಟುನಿಟ್ಟಾದ ಕ್ರಮಗಳ ಅನುಷ್ಠಾನದಲ್ಲಿ ವಿಳಂಬವನ್ನು ಗಮನಿಸಿದ ಸುಪ್ರೀಂ ಕೋರ್ಟ್, GRAP 4 ನಿರ್ಬಂಧಗಳನ್ನು ಜಾರಿಗೊಳಿಸಲು ತಕ್ಷಣವೇ ತಂಡಗಳನ್ನು ರಚಿಸುವಂತೆ ದೆಹಲಿ-ಎನ್‌ಸಿಆರ್ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



