ದೇಶ

2025 ರಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಸಾಧ್ಯತೆ

ಎರಡೂ ಕಡೆಯವರು ಭೇಟಿಯ ಸಾಧ್ಯತೆಯನ್ನು ನೋಡುತ್ತಿದ್ದಾರೆ ಆದರೆ ಇನ್ನೂ ಯಾವುದೂ ಅಂತಿಮಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2025 ರಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಸಾಧ್ಯತೆ
ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ — online desk
Published On :

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ರಾಜತಾಂತ್ರಿಕ ಮೂಲಗಳು ಮಂಗಳವಾರ ತಿಳಿಸಿವೆ.

ಎರಡೂ ಕಡೆಯವರು ಭೇಟಿಯ ಸಾಧ್ಯತೆಯನ್ನು ನೋಡುತ್ತಿದ್ದಾರೆ ಆದರೆ ಇನ್ನೂ ಯಾವುದೂ ಅಂತಿಮಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈನಲ್ಲಿ ಮಾಸ್ಕೋದಲ್ಲಿ ಉಭಯ ನಾಯಕರು ಶೃಂಗಸಭೆಯ ಮಾತುಕತೆ ನಡೆಸಿದಾಗ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.

ಕಳೆದ ಮಂಗಳವಾರ, ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಭಾರತದ ಹಿರಿಯ ಸಂಪಾದಕರೊಂದಿಗಿನ ವೀಡಿಯೊ ಸಂವಾದದಲ್ಲಿ ಭಾರತ ಮತ್ತು ರಷ್ಯಾ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧವನ್ನು ಉಲ್ಲೇಖಿಸಿದರು ಮತ್ತು ಪುಟಿನ್ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಹೇಳಿದ್ದರು.

ಆದರೆ ಕ್ರೆಮ್ಲಿನ್ ವಕ್ತಾರರು ಯಾವುದೇ ನಿರ್ದಿಷ್ಟ ದಿನಾಂಕಗಳನ್ನು ಘೋಷಿಸಿಲ್ಲ ಅಥವಾ ಭೇಟಿಯ ನಿರ್ಣಾಯಕ ಘೋಷಣೆಯನ್ನು ಮಾಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.