4 ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ: ಮತದಾನ ಪ್ರಗತಿಯಲ್ಲಿ
ಉತ್ತರ ಪ್ರದೇಶ, ಪಂಜಾಬ್, ಕೇರಳ ಮತ್ತು ಉತ್ತರಾಖಂಡದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಜೊತೆಗೆ 4 ರಾಜ್ಯಗಳ 15 ವಿಧಾನಸಭಾ ಸ್ಥಾನಗಳಿಗೆ ಇಂದು ಬುಧವಾರ ಉಪಚುನಾವಣೆ ನಡೆಯುತ್ತಿದೆ.
ಉತ್ತರ ಪ್ರದೇಶ, ಪಂಜಾಬ್, ಕೇರಳ ಮತ್ತು ಉತ್ತರಾಖಂಡದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.
ಉತ್ತರ ಪ್ರದೇಶದಲ್ಲಿ ಕತೇಹಾರಿ, ಕರ್ಹಾಲ್, ಮೀರಾಪುರ್, ಘಾಜಿಯಾಬಾದ್, ಮಜವಾನ್, ಸಿಸಾಮೌ, ಖೈರ್, ಫುಲ್ಪುರ್ ಮತ್ತು ಕುಂದರ್ಕಿಯಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಲೋಕಸಭೆ ಚುನಾವಣೆ ನಂತರ ರಾಜಕೀಯವಾಗಿ-ನಿರ್ಣಾಯಕ ರಾಜ್ಯದಲ್ಲಿ ಇದು ಇಂಡಿಯಾ ಬ್ಲಾಕ್ ಮತ್ತು ಎನ್‌ಡಿಎ ಮೈತ್ರಿಕೂಟಗಳಿಗೆ ಮೊದಲ ಚುನಾವಣಾ ಪರೀಕ್ಷೆಯಾಗಿದೆ.
ಪಂಜಾಬ್‌ನ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಗಿಡ್ಡರ್‌ಬಾಹಾ, ಡೇರಾ ಬಾಬಾ ನಾನಕ್, ಚಬ್ಬೇವಾಲ್ (ಎಸ್‌ಸಿ) ಮತ್ತು ಬರ್ನಾಲಾಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಇಲ್ಲಿ ಪ್ರತಿನಿಧಿಸುತ್ತಿದ್ದ ಶಾಸಕರು ಲೋಕಸಭೆಗೆ ಆಯ್ಕೆಯಾದ ನಂತರ ಉಪಚುನಾವಣೆ ಅನಿವಾರ್ಯವಾಯಿತು.
ಬಿಜೆಪಿ ಅಭ್ಯರ್ಥಿ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ಕಾಂಗ್ರೆಸ್‌ನ ಅಮೃತಾ ವಾರಿಂಗ್, ಜತೀಂದರ್ ಕೌರ್, ಎಎಪಿಯ ಹರ್ದೀಪ್ ಸಿಂಗ್ ಡಿಂಪಿ ಧಿಲ್ಲೋನ್, ಡಾ ಇಶಾಂಕ್ ಕುಮಾರ್ ಚಬ್ಬೇವಾಲ್ ಮತ್ತು ಬಿಜೆಪಿಯ ಕೇವಲ್ ಸಿಂಗ್ ಧಿಲ್ಲೋನ್, ಸೋಹನ್ ಸಿಂಗ್ ಥಂಡಾಲ್ ಮತ್ತು ರವಿಕರನ್ ಸಿಂಗ್ ಕಹ್ಲೋನ್ ಸೇರಿದಂತೆ ಪ್ರಮುಖ ಸ್ಪರ್ಧಿಗಳ ಭವಿಷ್ಯವನ್ನು ಉಪಚುನಾವಣೆ ನಿರ್ಧರಿಸುತ್ತದೆ.
ಕೇರಳದ ಪಾಲಕ್ಕಾಡ್ ಮತ್ತು ಉತ್ತರಾಖಂಡದ ಕೇದಾರನಾಥ ಕ್ಷೇತ್ರಕ್ಕೂ ಮತದಾನ ನಡೆಯುತ್ತಿದೆ. ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಫಿ ಪರಂಬಿಲ್ ಅವರು ವಡಕರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ನಂತರ ಪಾಲಕ್ಕಾಡ್‌ನಲ್ಲಿ ಉಪಚುನಾವಣೆ ಅನಿವಾರ್ಯವಾಗಿತ್ತು.
ಜುಲೈನಲ್ಲಿ ಹಾಲಿ ಬಿಜೆಪಿ ಶಾಸಕಿ ಶೈಲಾರಾಣಿ ರಾವತ್ ನಿಧನದ ನಂತರ ಕೇದಾರನಾಥ ಕ್ಷೇತ್ರ ತೆರವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


