ನಾಳೆ ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಫಲಿತಾಂಶ ಪ್ರಕಟ: ಎರಡೂ ರಾಜ್ಯಗಳಿಗೆ ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ವೀಕ್ಷಕರಾಗಿ ಅಶೋಕ್ ಗೆಹ್ಲೋಟ್, ಭೂಪೇಶ್ ಬಾಘೇಲ್ ಮತ್ತು ಗೃಹ ಸಚಿವ ಜಿ ಪರಮೇಶ್ವರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ನವದೆಹಲಿ: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೇರಿದಂತೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿದ್ದು, ಕಾಂಗ್ರೆಸ್ ಶುಕ್ರವಾರ ಈ ಎರಡೂ ರಾಜ್ಯಗಳಲ್ಲಿ ಚುನಾವಣೋತ್ತರ ಸನ್ನಿವೇಶಗಳನ್ನು ಮೇಲ್ವಿಚಾರಣೆ ಮಾಡಲು ವೀಕ್ಷಕರನ್ನು ನೇಮಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ವೀಕ್ಷಕರಾಗಿ ಅಶೋಕ್ ಗೆಹ್ಲೋಟ್, ಭೂಪೇಶ್ ಬಾಘೇಲ್ ಮತ್ತು ಗೃಹ ಸಚಿವ ಜಿ ಪರಮೇಶ್ವರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಜಾರ್ಖಂಡ್‌ಗೆ ತಾರಿಕ್ ಅನ್ವರ್, ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ಕೃಷ್ಣ ಅಲ್ಲವೂರು ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.
ಹಲವು ಎಕ್ಸಿಟ್ ಪೋಲ್‌ಗಳು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಆದರೆ ಕೆಲವೇ ಕೆಲವು ಎಕ್ಸಿಟ್ ಪೋಲ್ ಗಳು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಸದಸ್ಯರ ಅಗತ್ಯ ಇದ್ದು, 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಬಹುಮತಕ್ಕೆ 41 ಶಾಸಕರ ಅಗತ್ಯ ಇದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ-ಎನ್‌ಸಿಪಿ ಮೈತ್ರಿಕೂಟ ಅಧಿಕಾರದಲ್ಲಿದ್ದರೆ, ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್ ಆಡಳಿತ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



