ನವೆಂಬರ್ 25 ರಂದು ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಮಹಾಯುತಿ ಮೈತ್ರಿಕೂಟದ ದೊಡ್ಡ ಸಭೆಯೂ ಇದೇ ಸಮಯದಲ್ಲಿ ನಡೆಯುವ ಸಾಧ್ಯತೆಯಿದೆ. ಮಹಾಯುತಿ ಮೈತ್ರಿಕೂಟ 220 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮುಂಬೈ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಬಹುಮತ ಗಳಿಸಿದ್ದು, ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದಿದೆ.
ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಂಬಂಧ ನ.25 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನ.26 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಮಹಾಯುತಿ ಮೈತ್ರಿಕೂಟದ ದೊಡ್ಡ ಸಭೆಯೂ ಇದೇ ಸಮಯದಲ್ಲಿ ನಡೆಯುವ ಸಾಧ್ಯತೆಯಿದೆ. ಮಹಾಯುತಿ ಮೈತ್ರಿಕೂಟ 220 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮುಂಬೈನ ಬಿಜೆಪಿ ಕಚೇರಿಯಲ್ಲಿ ಈಗಾಗಲೇ ಸಂಭ್ರಮಾಚರಣೆ ಆರಂಭವಾಗಿದೆ.
ಶಿವಸೇನೆ ಸಂಸದ ಶ್ರೀಕಾಂತ್ ಶಿಂಧೆ, "ನಾವು ನಿರೀಕ್ಷಿಸಿದಂತೆ, ನಮಗೆ ಉತ್ತಮ ಸಂಖ್ಯೆಗಳು ಸಿಕ್ಕಿವೆ. ಮಹಾಯುತಿಯ ಬೆಂಬಲಕ್ಕೆ ನಿಂತು ಈ ಪ್ರಚಂಡ ಗೆಲುವು ನೀಡಿದ ಎಲ್ಲಾ ಮತದಾರರಿಗೆ ನಾನು ಧನ್ಯವಾದ..." ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



