ಅನಂತಪುರದಲ್ಲಿ ಬಸ್ ಮತ್ತು ಆಟೋ ನಡುವೆ ಭೀಕರ ಡಿಕ್ಕಿ: ಏಳು ಕೂಲಿ ಕಾರ್ಮಿಕರು ಸಾವು!
ಕುತ್ತಲೂರು ಮಂಡಲದ ನೆಲ್ಲುಟ್ಲ ಗ್ರಾಮದ 12 ಮಂದಿ ಕೃಷಿ ಕೂಲಿ ಕಾರ್ಮಿಕರು ಆಟೋದಲ್ಲಿ ಗರಲದಿನ್ನೆಗೆ ಕೆಲಸಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗರಾಲ್ದಿನ್ನೆ ಮಂಡಲದ ತಲಗಸ್ಪಲ್ಲೆ ಬಳಿ ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುತ್ತಲೂರು ಮಂಡಲದ ನೆಲ್ಲುಟ್ಲ ಗ್ರಾಮದ 12 ಮಂದಿ ಕೃಷಿ ಕೂಲಿ ಕಾರ್ಮಿಕರು ಆಟೋದಲ್ಲಿ ಗರಲದಿನ್ನೆಗೆ ಕೆಲಸಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಿಂತಿರುಗುತ್ತಿದ್ದಾಗ ಎದುರುಗಡೆಯಿಂದ ಬಂದ ಆರ್‌ಟಿಸಿ ಬಸ್ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಮೃತರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನುಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರೆ, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಗಾಯಾಳುಗಳು ಅನಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ಪಡೆದ ಜಿಲ್ಲಾ ಎಸ್ಪಿ ಜಗದೀಶ್, ಡಿಎಸ್ಪಿ ವೆಂಕಟೇಶ್ವರಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ತನಿಖೆಗಾಗಿ ಪೊಲೀಸರು ಆರ್‌ಟಿಸಿ ಬಸ್ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಘಟನೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



