ಉತ್ತರ ಪ್ರದೇಶ: ತಪ್ಪಾದ ನಕ್ಷೆ ತೋರಿಸಿ ಮೂವರ ಬಲಿ ತೆಗೆದುಕೊಂಡ ಗೂಗಲ್ ಮ್ಯಾಪ್!
ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ.

ಲಕ್ನೋ: ಗೂಗಲ್ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು.
ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಕಾರು 50 ಅಡಿ ಎತ್ತರದಿಂದ ರಾಮಗಂಗಾ ನದಿಗೆ ಬಿದ್ದಿದೆ.
ಉತ್ತರ ಪ್ರದೇಶದ ಬರೇಲಿ ಮತ್ತು ಬುಡೌನ್ ಜಿಲ್ಲೆಗಳ ನಡುವಿನ ಗಡಿಯಲ್ಲಿರುವ ಫರೀದ್‌ಪುರ ಮತ್ತು ದತಗಂಜ್‌ಗೆ ಸಂಪರ್ಕ ಕಲ್ಪಿಸುವ ರಾಮಗಂಗಾ ನದಿಯ ಮೇಲಿನ ಅಪೂರ್ಣ ಸೇತುವೆಯಿಂದ ಕಾರು ಉರುಳಿ ಬಿದ್ದ ಪರಿಣಾಮ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ನಿರ್ಮಾಣ ಹಂತದ ಸೇಲುವೆ ಮೇಲೆ ಬ್ಯಾರಿಕೇಟ್ ಹಾಕದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂವರು ಹರ್ಯಾಣದ ಗುರುಗ್ರಾಮದಿಂದ ಕಾರಿನಲ್ಲಿ ಬರೇಲಿಗೆ ಹೊರಟಿದ್ದರು. ಇಬ್ಬರ ಮೃತದೇಹಗಳ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸುರಕ್ಷತಾ ಕ್ರಮಗಳ ಕೊರತೆ ಅಥವಾ ಸ್ಥಳದಲ್ಲಿ ಅಡಗಿರುವ ಅಪಾಯದ ಬಗ್ಗೆ ಎಚ್ಚರಿಕೆ ನೀಡುವ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


