ಅಮೆರಿಕ: ಪೆಟ್ರೋಲ್ ಬಂಕ್ ನಲ್ಲಿ ತೆಲಂಗಾಣದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ
ಭಾರತೀಯ ಕಾಲಮಾನ ಶನಿವಾರ ಬೆಳಗ್ಗೆ ಚಿಕಾಗೋ ಬಳಿಯ ಗ್ಯಾಸ್ ಸ್ಟೇಷನ್‌ನಲ್ಲಿ ಸಾಯಿ ತೇಜ ನೂಕರಾಪು(22) ಎಂಬ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಹೈದರಾಬಾದ್: ಯುನೈಟೆಡ್ ಸ್ಟೇಟ್ಸ್‌ನ ಗ್ಯಾಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣದ ಖಮ್ಮಂ ಜಿಲ್ಲೆಯ ಯುವಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಕುಟುಂಬ ಸದಸ್ಯರು ಶನಿವಾರ ತಿಳಿಸಿದ್ದಾರೆ.
ಭಾರತೀಯ ಕಾಲಮಾನ ಶನಿವಾರ ಬೆಳಗ್ಗೆ ಚಿಕಾಗೋ ಬಳಿಯ ಗ್ಯಾಸ್ ಸ್ಟೇಷನ್‌ನಲ್ಲಿ ಸಾಯಿ ತೇಜ ನೂಕರಾಪು(22) ಎಂಬ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಬಿಆರ್‌ಎಸ್ ಎಂಎಲ್‌ಸಿ ಮಧುಸೂದನ್ ತಾಥಾ ಅವರು ಅಮೆರಿಕದಿಂದ ಪಡೆದ ಪ್ರಾಥಮಿಕ ಮಾಹಿತಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.
ಖಮ್ಮಮ್ ಬಳಿಯ ಅವರ ನಿವಾಸದಲ್ಲಿ ಸಂತ್ರಸ್ತೆಯ ಪೋಷಕರನ್ನು ಭೇಟಿ ಮಾಡಿದ ಎಂಎಲ್‌ಸಿ ಮಧುಸೂದನ್ ಅವರು, ಘಟನೆ ಸಂಭವಿಸಿದಾಗ ಸಾಯಿ ತೇಜ ಅವರು ಕರ್ತವ್ಯದಲ್ಲಿ ಇರಲಿಲ್ಲ. ಆದರೆ ಸ್ವಲ್ಪ ಸಮಯದವರೆಗೆ ಇರಲು ಕೇಳಿಕೊಂಡ ಸ್ನೇಹಿತರಿಗೆ ಸಹಾಯ ಮಾಡಲು ಇದ್ದರು. ಸ್ನೇಹಿತ ಯಾವುದೋ ಕೆಲಸದ ಮೇಲೆ ಹೊರಗೆ ಹೋಗಿದ್ದರು ಎಂದು ತಿಳಿಸಿದ್ದಾರೆ.
ಸಾಯಿ ತೇಜ ಭಾರತದಲ್ಲಿ ಬಿಬಿಎ ಮುಗಿಸಿ ಅಮೆರಿಕಾದಲ್ಲಿ ಎಂಬಿಎ ಓದುತ್ತಿದ್ದಾರೆ. ಯುವಕ ಓದಿನ ಜತೆಗೆ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದ ಎಂದು ಆತನ ಸಂಬಂಧಿಕರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಹಾಯಕ್ಕಾಗಿ ತೆಲುಗು ಅಸೋಸಿಯೇಶನ್ ಆಫ್ ನಾರ್ತ್ ಅಮೆರಿಕಾ(ತಾನಾ) ಸದಸ್ಯರೊಂದಿಗೆ ಮಾತನಾಡಿದ್ದೇನೆ. ಮೃತದೇಹ ಮುಂದಿನ ವಾರ ಭಾರತ ತಲುಪುವ ನಿರೀಕ್ಷೆಯಿದೆ ಎಂದು ಎಂಎಲ್‌ಸಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



