ಚೆನ್ನೈ ನಲ್ಲಿ ಚಂಡಮಾರುತ: ಜಲಾವೃತಗೊಂಡ ಎಟಿಎಂ ನಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾಗಿ ವ್ಯಕ್ತಿ ಸಾವು!
ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿಯ ದೇಹ ತೇಲುತ್ತಿತ್ತು. ಸ್ಥಳೀಯರು ಅದನ್ನು ಮರದ ಕಂಬದಿಂದ ಮುಂದೂಡಿದರು.

ಚೆನ್ನೈ: ಚೆನ್ನೈನಲ್ಲಿ ಚಂಡಮಾರುತದ ಪರಿಣಾಮ ಉಂಟಾಗಿರುವ ಪ್ರವಾಹಕ್ಕೆ ಎಟಿಎಂನಲ್ಲಿ ವಿದ್ಯುತ್ ಪ್ರವಹಿಸಿದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ.
ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿಯ ದೇಹ ತೇಲುತ್ತಿತ್ತು. ಸ್ಥಳೀಯರು ಅದನ್ನು ಮರದ ಕಂಬದಿಂದ ಮುಂದೂಡಿದರು. ನಂತರ ಕೆಲವು ವ್ಯಕ್ತಿಗಳು ಚೆನ್ನೈನ ಎಟಿಎಂನ ಹೊರಗೆ ಪ್ರವಾಹದ ನೀರಿನಿಂದ ಆತನ ದೇಹವನ್ನು ಹೊರತೆಗೆದರು. ಫೆಂಗಲ್ ಚಂಡಮಾರುತ ಸಂಜೆಯ ವೇಳೆಗೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭಾರೀ ಮಳೆಯಾಗುತ್ತಿದೆ.

'ಫೆಂಗಲ್' : ತಮಿಳು ನಾಡು-ಪುದುಚೆರಿ ತೀರಕ್ಕೆ ಅಪ್ಪಳಿಸಲಿರುವ ಚಂಡಮಾರುತ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಇದುವರೆಗೆ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆತನಿಗೆ ವಿದ್ಯುತ್ ಸ್ಪರ್ಶವಾಗಿರುವ ಸಾಧ್ಯತೆ ಇದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಜೆ 7 ಗಂಟೆಯವರೆಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ನಗರದ ಹಲವೆಡೆ ಜಲಾವೃತವಾಗಿರುವ ಬಗ್ಗೆ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


