ಮಾನನಷ್ಟ ಮೊಕದ್ದಮೆ ಪ್ರಕರಣ: ಸಾವರ್ಕರ್ ಟೀಕಿಸಿದ್ದ ರಾಹುಲ್ ಗಾಂಧಿಗೆ ನಾಸಿಕ್ ಕೋರ್ಟ್ ಸಮನ್ಸ್
ಮುಂದಿನ ವಿಚಾರಣೆಗೆ ವೈಯಕ್ತಿಕವಾಗಿ ಅಥವಾ ನಿಮ್ಮ ಕಾನೂನು ಪ್ರತಿನಿಧಿಯ ಮೂಲಕ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.

ಮುಂಬೈ: ಹಿಂದುತ್ವವಾದಿ ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಸಂಬಂಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಗೆ ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ನಾಸಿಕ್‌ನ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್, ದೀಪಾಲಿ ಪರಿಮಳ್ ಕಡುಸ್ಕರ್ ಅವರು, ಸೆಪ್ಟೆಂಬರ್ 27 ರಂದು ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದು, ಮುಂದಿನ ವಿಚಾರಣೆಗೆ ವೈಯಕ್ತಿಕವಾಗಿ ಅಥವಾ ನಿಮ್ಮ ಕಾನೂನು ಪ್ರತಿನಿಧಿಯ ಮೂಲಕ ಹಾಜರಾಗಬೇಕು ಎಂದು ಸೂಚಿಸಿದೆ. ಆದರೆ ದಿನಾಂಕ ಇನ್ನೂ ನಿರ್ಧರಿಸಿಲ್ಲ.
ರಾಹುಲ್ ಗಾಂಧಿ ಅವರು ಸಾವರ್ಕರ್ ಅವರ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ ಎಂದು ಎನ್‌ಜಿಒವೊಂದರ ನಿರ್ದೇಶಕರಾಗಿರುವ ದೂರುದಾರರು ಆರೋಪಿಸಿದ್ದು, ತಾನು ಹಿಂಗೋಲಿಯಲ್ಲಿ ಗಾಂಧಿಯವರು ನಡೆಸಿದ ಪತ್ರಿಕಾಗೋಷ್ಠಿ ಮತ್ತು ನವೆಂಬರ್ 2022 ರಲ್ಲಿ ಕಾಂಗ್ರೆಸ್ ನಾಯಕ ಮಾಡಿದ ಭಾಷಣವನ್ನು ವೀಕ್ಷಿಸಿದ್ದೇನೆ ಎಂದು ಹೇಳಿದ್ದಾರೆ.
ದೂರುದಾರರ ಪ್ರಕಾರ, "ಸಾವರ್ಕರ್ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜಿನ್" ಎಂದು ರಾಹುಲ್ ಗಾಂಧಿ ಹೇಳಿದ್ದು, ಅದು ಮಾನಹಾನಿಕರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



