ಜಮ್ಮು-ಕಾಶ್ಮೀರ ಚುನಾವಣೆ: ಒಟ್ಟಾರೆ ದಾಖಲೆಯ ಶೇ. 63.88 ರಷ್ಟು ಮತದಾನ
ಮತಗಟ್ಟೆಗಳಲ್ಲಿ ಒಟ್ಟಾರೇ ಶೇ. 63.88 ರಷ್ಟು ಮತದಾನವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಶೇ. 58.58 ರಷ್ಟು ಮತದಾನವಾಗಿತ್ತು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ನವದೆಹಲಿ: ಮೂರು ಹಂತಗಳಲ್ಲಿ ನಡೆದ ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಪುರುಷರಿಗಿಂತ ಮಹಿಳೆಯರೇ ಅಧಿಕ ಸಂಖ್ಯೆಯಲ್ಲಿ ಮತದಾನ ಮಾಡುವುದರೊಂದಿಗೆ ದಾಖಲೆಯ ಶೇ. 69.69 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಗುರುವಾರ ಹೇಳಿದೆ.
ಮತಗಟ್ಟೆಗಳಲ್ಲಿ ಒಟ್ಟಾರೇ ಶೇ. 63.88 ರಷ್ಟು ಮತದಾನವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಶೇ. 58.58 ರಷ್ಟು ಮತದಾನವಾಗಿತ್ತು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಅಕ್ಟೋಬರ್ 1 ರಂದು ಕೇಂದ್ರಾಡಳಿತ ಪ್ರದೇಶದ 40 ಸ್ಥಾನಗಳಿಗೆ ಮೂರನೇ ಹಂತದ ಮತದಾನ ನಡೆದಿತ್ತು.
ಶೇ. 70.02 ರಷ್ಟಿದ್ದ ಮಹಿಳೆಯರಿಗೆ ಹೋಲಿಸಿದರೆ ಶೇ. 69.37 ರಷ್ಟು ಪುರುಷ ಮತದಾರರು ಮತದಾನ ಮಾಡಿದ್ದಾರೆ. ಸುಮಾರು ಶೇ. 44 ರಷ್ಟು ತೃತೀಯ ಲಿಂಗಿಗಳು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ. 64.68 ರಷ್ಟು ಪುರುಷರು ಮತದಾನದಲ್ಲಿ ಪಾಲ್ಗೊಳ್ಳುವುದರೊಂದಿಗೆ ದಾಖಲೆಯ ಒಟ್ಟಾರೇ ಶೇ. 63. 88 ರಷ್ಟು ಮತದಾನವಾಗಿದೆ.
ಒಟ್ಟಾರೇ ಶೇ. 63.04ರಷ್ಟು ಮಹಿಳೆಯರು ಮತ್ತು ಶೇ. 38.24 ರಷ್ಟು ತೃತೀಯ ಲಿಂಗಿಗಳು ಮತದಾನ ಮಾಡಿದ್ದಾರೆ.
ಮತ ಎಣಿಕೆ ವೇಳೆ ಅಂಚೆ ಮತಪತ್ರಗಳ ಎಣಿಕೆ ಲಭ್ಯವಿರುತ್ತವೆ. ಅಂಚೆ ಮತಪತ್ರಗಳಲ್ಲಿ ಸೇವಾ ಮತದಾರರು, ಗೈರುಹಾಜರಾದ ಮತದಾರರು (85 ವರ್ಷಕ್ಕಿಂತ ಮೇಲ್ಪಟ್ಟವರು, ವಿಕಲಚೇತನರು, ಅಗತ್ಯ ಸೇವೆಗಳಲ್ಲಿ ಇರುವವರು ಮತ್ತು ಚುನಾವಣಾ ಕರ್ತವ್ಯದಲ್ಲಿರುವ ಮತದಾರರಿಗೆ ನೀಡಿದ ಅಂಚೆ ಮತಪತ್ರಗಳು ಸೇರಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


