ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳ ಲೂಟಿ!
‘ಸ್ವಚ್ಛತಾ ಅಭಿಯಾನ’ದ ಅಂಗವಾಗಿ ಪಟ್ಟಣದ ವಿವಾದಿತ ಜಮೀನನ್ನು ಸ್ವಚ್ಛಗೊಳಿಸುವ ವಿಚಾರವಾಗಿ ಬುಧವಾರ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಉಖ್ರುಲ್ ಪಟ್ಟಣದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಒಂದು ಗುಂಪು ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳನ್ನು ದೋಚಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
‘ಸ್ವಚ್ಛತಾ ಅಭಿಯಾನ’ದ ಅಂಗವಾಗಿ ಪಟ್ಟಣದ ವಿವಾದಿತ ಜಮೀನನ್ನು ಸ್ವಚ್ಛಗೊಳಿಸುವ ವಿಚಾರವಾಗಿ ಬುಧವಾರ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ನಾಗಾ ಸಮುದಾಯದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುತ್ತಿರುವಾಗಲೇ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಲಾಗಿದೆ. ಘರ್ಷಣೆಯ ನಂತರ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
"ಉಖ್ರುಲ್ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ, ಬಹುಪಾಲು ಯುವಕರನ್ನು ಒಳಗೊಂಡ ಗುಂಪು ವಿನೋ ಬಜಾರ್‌ನಲ್ಲಿರುವ ಪೊಲೀಸ್ ಠಾಣೆಗೆ ನುಗ್ಗಿ, ಶಸ್ತ್ರಾಸ್ತ್ರಗಳನ್ನು ದೋಚಿದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿರುವುದರಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳ ಸಂಖ್ಯೆ ಮತ್ತು ಅದರ ಪ್ರಕಾರಗಳನ್ನು ತಕ್ಷಣವೇ ದೃಢೀಕರಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಆದಾಗ್ಯೂ, ಲೂಟಿ ಮಾಡಿದ ಶಸ್ತ್ರಾಸ್ತ್ರಗಳಲ್ಲಿ AK-47 ಮತ್ತು INSAS ರೈಫಲ್‌ಗಳು ಸೇರಿವೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



