ದೇಶ

Delhi: ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಟ್ಟ ವೈದ್ಯರನ್ನೇ ಗುಂಡಿಟ್ಟು ಕೊಂದು ಯುವಕರು ಪರಾರಿ!

ದೆಹಲಿಯ ಜೈತ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಅಪ್ರಾಪ್ತರು 55 ವರ್ಷದ ವೈದ್ಯನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಹತ್ಯೆಗೊಳಗಾದ ವೈದ್ಯನನ್ನು ಡಾ.ಜಾವೇದ್ ಅಖ್ತರ್ ಎಂದು ಗುರುತಿಸಲಾಗಿದೆ.

Delhi: ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಟ್ಟ ವೈದ್ಯರನ್ನೇ ಗುಂಡಿಟ್ಟು ಕೊಂದು ಯುವಕರು ಪರಾರಿ!
ದೆಹಲಿಯಲ್ಲಿ ವೈದ್ಯನ ಹತ್ಯೆ — ANI
Published On :

ನವದೆಹಲಿ: ಕೋಲ್ಕತಾ ಆರ್ ಜಿ ಕರ್ ಆಸ್ಪತ್ರೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ದೆಹಲಿ ಆಸ್ಪತ್ರೆಯಲ್ಲಿ ಇಬ್ಬರು ಅಪ್ರಾಪ್ತ ಯುವಕರು ತಮಗೆ ಚಿಕಿತ್ಸೆ ನೀಡಿದ ವೈದ್ಯರನ್ನೇ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ದೆಹಲಿಯ ಜೈತ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಅಪ್ರಾಪ್ತರು 55 ವರ್ಷದ ವೈದ್ಯನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಹತ್ಯೆಗೊಳಗಾದ ವೈದ್ಯನನ್ನು ಡಾ.ಜಾವೇದ್ ಅಖ್ತರ್ ಎಂದು ಗುರುತಿಸಲಾಗಿದೆ.

ಆಸ್ಪತ್ರೆ ಮೂಲಗಳ ಪ್ರಕಾರ ಇಬ್ಬರು 16-17 ವರ್ಷ ವಯಸ್ಸಿನವರು ತಡರಾತ್ರಿ ಆಸ್ಪತ್ರೆಗೆ ಬಂದಿದ್ದರು. ಅದರಲ್ಲಿ ಒಬ್ಬ ತನ್ನ ಗಾಯಗೊಂಡ ಕಾಲ್ಬೆರಳಿಗೆ ಡ್ರೆಸ್ಸಿಂಗ್ ಮಾಡಲು ಕೇಳಿದ. ಆತನಿಗೆ ಚಿಕಿತ್ಸೆ ನೀಡಿ, ಡ್ರೆಸ್ಸಿಂಗ್ ಮಾಡಲಾಯಿತು. ಬಳಿಕ ತನಗೆ ಪ್ರಿಸ್ಕ್ರಿಪ್ಷನ್ ಬೇಕು ಎಂದು ಕೇಳಿದ.

ಈ ವೇಳೆ ಡಾ.ಜಾವೇದ್ ಅಖ್ತರ್ ಅವರ ಕ್ಯಾಬಿನ್‌ಗೆ ಹೋದರು. ಅವರು ಕ್ಯಾಬಿನ್ ನತ್ತ ತಿರುಗುತ್ತಲೇ ಯುವಕರು ವೈದ್ಯನ ಮೇಲೆ ಗುಂಡಿನ ದಾಳಿ ನಡೆಸಿದ್ದು, ವೈದ್ಯರ ತಲೆಗೆ ಗುಂಡು ತಗುಲಿ ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳು 16 ಅಥವಾ 17 ವರ್ಷ ವಯಸ್ಸಿನವರಿರಬಹುದು ಎಂದು ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದು, ಮೇಲ್ನೋಟಕ್ಕೆ ಪೂರ್ವಯೋಜಿತ ಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಂತೆಯೇ ಆರೋಪಿಗಳ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು ಶಂಕಿತರನ್ನು ಗುರುತಿಸಲು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.