ಬೈಕ್‌ಗಳಿಗೆ ಡಂಪರ್ ಡಿಕ್ಕಿ: ಸ್ಥಳದಲ್ಲೇ ಐವರು ಬೈಕ್ ಸವಾರರ ದಾರುಣ ಸಾವು
ಬ್ರೇಕ್ ವಿಫಲವಾದ ನಂತರ ಡಂಪರ್ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಲಾಲ್ಸೋಟ್ ಪೊಲೀಸ್ ಠಾಣೆಯ ಉಸ್ತುವಾರಿ ಮಹಾವೀರ್ ಸಿಂಗ್ ಹೇಳಿದ್ದಾರೆ.

ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದಾರುಣ ಸಾವನ್ನಪ್ಪಿದ್ದಾರೆ. ಮೂರು ಬೈಕ್‌ಗಳಿಗೆ ಡಂಪರ್ ಡಿಕ್ಕಿ ಹೊಡೆದಿದ್ದು, ಐದು ಜನರು ಸಾವನ್ನಪ್ಪಿದ್ದು 10 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಬ್ರೇಕ್ ವಿಫಲವಾದ ನಂತರ ಡಂಪರ್ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಲಾಲ್ಸೋಟ್ ಪೊಲೀಸ್ ಠಾಣೆಯ ಉಸ್ತುವಾರಿ ಮಹಾವೀರ್ ಸಿಂಗ್ ಹೇಳಿದ್ದಾರೆ.
ಮೃತ ಐವರಲ್ಲಿ ನಾಲ್ವರನ್ನು ಲಕ್ಷ್ಮಿ ಮಹಾವಾರ್ (7), ಮಹೇಶ್ ಚಂದ್ರ ಶರ್ಮಾ (45), ರಾಮ್ ಹರಿ ಯೋಗಿ (42) ಮತ್ತು ರೆವದ್ ಮಾಲ್ ಮಹಾವರ್ (40) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.
ಘಟನೆಗೆ ಸಂಬಂಧಿಸಿದಂತೆ, ರಾಜಸ್ಥಾನದ ರಾಜ್ಯಪಾಲ ಹರಿಭಾವು ಬಾಗ್ಡೆ ಮತ್ತು ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



