ಪಂಜಾಬ್: ಅಕ್ರಮ ಹಣ ವರ್ಗಾವಣೆ ಪ್ರಕರಣ, AAP ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ
ಜಲಂಧರ್‌ನಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ಹೇಮಂತ್ ಸೂದ್ ಮತ್ತು ಮತ್ತೊಬ್ಬ ವ್ಯಕ್ತಿ ಚಂದ್ರಶೇಖರ್ ಅಗರವಾಲ್‌ಗೆ ಸಂಬಂಧಿಸಿದ ಮನೆಗಳಲ್ಲಿಯೂ ಶೋಧ ಕಾರ್ಯ ನಡೆಸಲಾಗುತ್ತಿದೆ ಎನ್ನಲಾಗಿದೆ.

ಗುರುಗ್ರಾಮ್: AAP ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಲೂಧಿಯಾನ (ಪಂಜಾಬ್) ಮತ್ತು ಗುರುಗ್ರಾಮ್ ದಲ್ಲಿರುವ (ಹರಿಯಾಣ) 61 ವರ್ಷದ ಅರೋರಾ ಅವರ ಮನೆ ಸೇರಿದಂತೆ ಸುಮಾರು 16-17 ಕಡೆಗಳಲ್ಲಿ ಶೋಧಿಸಲಾಗುತ್ತಿದೆ. ಜಲಂಧರ್‌ನಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ಹೇಮಂತ್ ಸೂದ್ ಮತ್ತು ಮತ್ತೊಬ್ಬ ವ್ಯಕ್ತಿ ಚಂದ್ರಶೇಖರ್ ಅಗರವಾಲ್‌ಗೆ ಸಂಬಂಧಿಸಿದ ಮನೆಗಳಲ್ಲಿಯೂ ಶೋಧ ಕಾರ್ಯ ನಡೆಸಲಾಗುತ್ತಿದೆ ಎನ್ನಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಸಂಜೀವ್ ಅರೋರಾ, ಶೋಧ ಕಾರ್ಯಾಚರಣೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದೇನೆ, ಶೋಧ ಕಾರ್ಯಾಚರಣೆಯ ಕಾರಣದ ಬಗ್ಗೆ ನನಗೆ ಖಚಿತ ಮಾಹಿತಿ ಇಲ್ಲ. ಏಜೆನ್ಸಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ ಮತ್ತು ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಮ್ಮ ಪಕ್ಷದ ಸಂಸದ, ಉದ್ಯಮಿ ವಿರುದ್ಧದ ದಾಳಿ ಪಕ್ಷವನ್ನು ಒಡೆಯುವ ಪ್ರಯತ್ನವಾಗಿದೆ. ಆದರೆ ಎಎಪಿ ಸದಸ್ಯರು ನಿಲ್ಲುವುದಿಲ್ಲ, ಮಾರಾಟವಾಗುವುದಿಲ್ಲ ಮತ್ತು ಹೆದರುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಫೋಸ್ಟ್ ಮಾಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಶೋಧ ನಡೆಸಲಾಗುತ್ತಿದ್ದು, ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಅರೋರಾ ತನ್ನ ಕಂಪನಿಯ ಹೆಸರಿಗೆ ಕಾನೂನು ಬಾಹಿರವಾಗಿ ಕೈಗಾರಿಕಾ ಪ್ಲಾಟ್ ಅನ್ನು ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


