ದೇಶ

ಪಶ್ಚಿಮ ಬಂಗಾಳ: ಕಿರಿಯ ವೈದ್ಯರ ಆಮರಣಾಂತ ಉಪವಾಸ 3ನೇ ದಿನಕ್ಕೆ

ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ನಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ನಾವು ಇದನ್ನು ಧರಣಿ ಮುಂದುವರಿಸುತ್ತೇವೆ.

ಪಶ್ಚಿಮ ಬಂಗಾಳ: ಕಿರಿಯ ವೈದ್ಯರ ಆಮರಣಾಂತ ಉಪವಾಸ 3ನೇ ದಿನಕ್ಕೆ
ಕಿರಿಯ ವೈದ್ಯರ ಆಮರಣಾಂತ ಉಪವಾಸ
Published On :

ಕೋಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಹಾಗೂ ಕೆಲಸದ ಸ್ಥಳದಲ್ಲಿ ಸುರಕ್ಷತೆಗೆ ಒತ್ತಾಯಿಸಿ ಪಶ್ಚಿಮ ಬಂಗಾಳ ಕಿರಿಯ ವೈದ್ಯರ ಆಮರಣಾಂತ ಉಪವಾಸ ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಶನಿವಾರ ಸಂಜೆಯಿಂದ ಏಳು ಕಿರಿಯ ವೈದ್ಯಾಧಿಕಾರಿಗಳು ಆಮರಣಾಂತ ಉಪವಾಸ ಆರಂಭಿಸಿದ್ದು, “ನಮ್ಮ ಆಮರಣಾಂತ ಉಪವಾಸ ಸತ್ಯಾಗ್ರಹ ಮುಂದುವರೆದಿದೆ. ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ನಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ನಾವು ಇದನ್ನು ಧರಣಿ ಮುಂದುವರಿಸುತ್ತೇವೆ. ಯಾವುದೇ ಒತ್ತಡಕ್ಕೆ ಮಣಿದು ನಮ್ಮ ಪ್ರತಿಭಟನೆಯ ಹಾದಿಯಿಂದ ದೂರ ಸರಿಯಲು ಸಾಧ್ಯವಿಲ್ಲ ಎಂದು ಕಿರಿಯ ವೈದ್ಯ ಅನಿಕೇತ್ ಮಹತೋ ಅವರು ಪಿಟಿಐಗೆ ತಿಳಿಸಿದ್ದಾರೆ.

ಆರ್‌ಜಿ ಕರ್ ಆಸ್ಪತ್ರೆಯ ಮಹತೋ ಅವರು ಸ್ನಿಗ್ಧಾ ಹಜ್ರಾ, ಕೋಲ್ಕತ್ತಾ ವೈದ್ಯಕೀಯ ಕಾಲೇಜಿನ ತನಯ ಪಂಜಾ ಮತ್ತು ಅನುಸ್ತುಪ್ ಮುಖೋಪಾಧ್ಯಾಯ, ಎಸ್‌ಎಸ್‌ಕೆಎಂ ಆಸ್ಪತ್ರೆಯ ಅರ್ನಾಬ್ ಮುಖೋಪಾಧ್ಯಾಯ, ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜಿನ ಪುಲಸ್ತ ಆಚಾರ್ಯ ಮತ್ತು ಕೆಪಿಸಿ ವೈದ್ಯಕೀಯ ಕಾಲೇಜಿನ ಸಯಂತನಿ ಘೋಷ್ ಹಜ್ರಾ ಅವರು ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ.

ನಗರದ ಧರ್ಮತಾಲಾ ಪ್ರದೇಶದ ಡೋರಿನಾ ಕ್ರಾಸಿಂಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಜೈವಿಕ ಶೌಚಾಲಯ ಸ್ಥಾಪಿಸಲು ಪೊಲೀಸರು ಅನುಮತಿ ನೀಡಿಲ್ಲ. ಕೋಲ್ಕತ್ತಾ ಪೊಲೀಸರು ಸಹಕಾರ ನೀಡುತ್ತಿಲ್ಲ ಎಂದು ಕಿರಿಯ ವೈದ್ಯಾಧಿಕಾರಿಗಳು ಆರೋಪಿಸಿದ್ದಾರೆ.

ಪಾರದರ್ಶಕತೆ ಕಾಯ್ದುಕೊಳ್ಳಲು ಕಿರಿಯ ವೈದ್ಯಾಧಿಕಾರಿಗಳು ತಮ್ಮ ಸಹೋದ್ಯೋಗಿಗಳು ಮುಷ್ಕರ ನಡೆಸುತ್ತಿರುವ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.

ಹೆಚ್ಚಿನ ಸಂಖ್ಯೆಯ ಜನರು ಮತ್ತು ಕೆಲವು ಗಣ್ಯರು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿ, ಧರಣಿ ನಿರತ ವೈದ್ಯರಿಗೆ ಬೆಂಬಲ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.