ಹರಿಯಾಣ: ಪಕ್ಷೇತರ ಅಭ್ಯರ್ಥಿ, ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಗೆಲುವು
ಬಿಜೆಪಿ ಸಂಸದ ನವೀನ್ ಜಿಂದಾಲ್ ಅವರ ತಾಯಿಯಾಗಿರುವ ಸಾವಿತ್ರಿ ಜಿಂದಾಲ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ್ ರಾಣಾ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಚಂಡೀಗಢ: ಹರಿಯಾಣದ ಹಿಸಾರ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದೇಶದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಬಿಜೆಪಿಯ ಕುರುಕ್ಷೇತ್ರ ಸಂಸದ ನವೀನ್ ಜಿಂದಾಲ್ ಅವರ ತಾಯಿಯಾಗಿರುವ ಸಾವಿತ್ರಿ ಜಿಂದಾಲ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ್ ರಾಣಾ ಅವರ ವಿರುದ್ಧ 18,941 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಸಾವಿತ್ರಿ ಜಿಂದಾಲ್ ಅವರು 49,231 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 30,290 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಹಾಗೂ ನಿರ್ಗಮಿತ ಶಾಸಕ ಕಮಲ್ ಗುಪ್ತಾ ಅವರು ಕೇವಲ 17,385 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಫೋರ್ಬ್ಸ್ ಇಂಡಿಯಾ ಈ ವರ್ಷ, ಸಾವಿತ್ರಿ ಜಿಂದಾಲ್ ಅವರು 29.1 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಆಸ್ತಿ ಹೊಂದಿರುವ ದೇಶದ ಅತ್ಯಂತ ಶ್ರೀಮಂತ ಮಹಿಳೆ ಎಂದು ಪಟ್ಟಿ ಮಾಡಿದೆ.
ಅಕ್ಟೋಬರ್ 5 ರಂದು ನಡೆದ 90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಸತತ ಮೂರನೇ ಬಾರಿಗೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



