ದೇಶ

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶ: 7 ಪಕ್ಷೇತರರ ಗೆಲುವು

2014 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಮೂವರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈಗ ಏಳು ಪಕ್ಷೇತರರು ಗೆದ್ದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶ: 7 ಪಕ್ಷೇತರರ ಗೆಲುವು
ಬಿಜೆಪಿ ಮುಖಂಡರ ಸಂಭ್ರಮ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಏಳು ಪಕ್ಷೇತರ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ.

2014 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಮೂವರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈಗ ಏಳು ಪಕ್ಷೇತರರು ಗೆದ್ದಿದ್ದಾರೆ.

ಜಮ್ಮು ಪ್ರದೇಶದ ಛಂಬ್ ಕ್ಷೇತ್ರದಿಂದ ಕಾಂಗ್ರೆಸ್ ತೊರೆದು ಪಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತೇಶ್ ಶರ್ಮಾ ಅವರು ಬಿಜೆಪಿ ಅಭ್ಯರ್ಥಿ ರಾಜೀವ್ ಶರ್ಮಾ ಅವರ ವಿರುದ್ಧ 6,929 ಮತಗಳ ಅಂತರದಿಂದ ಗೆದ್ದಿದ್ದಾರೆ.

ಎರಡು ಬಾರಿ ಸಂಸದ ಹಾಗೂ ಕಾಂಗ್ರೆಸ್ ನ ಮಾಜಿ ಸಚಿವ ಮದನ್ ಲಾಲ್ ಶರ್ಮಾ ಅವರ ಪುತ್ರರಾಗಿರುವ 42 ವರ್ಷದ ಸತೇಶ್ ಶರ್ಮಾ ಅವರು 33,985 ಮತಗಳನ್ನು ಪಡೆದಿದ್ದಾರೆ.

ಈ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ತಾರಾ ಚಂದ್ ಅವರು 16,449 ಮತಗಳನ್ನು ಪಡೆದು ಮೂರನೇ ಸ್ಥಾನ ಕುಸಿದಿದ್ದಾರೆ.

ಇಂದರ್ವಾಲ್‌ನಲ್ಲಿ ಪಕ್ಷೇತರ ಅಭ್ಯರ್ಥಿ ಪಯಾರೆ ಲಾಲ್ ಶರ್ಮಾ ಅವರು ಹಿರಿಯ ನಾಯಕ ಗುಲಾಮ್ ಮೊಹಮ್ಮದ್ ಸರೂರಿ ಅವರ ವಿರುದ್ಧ 643 ಮತಗಳ ಅಲ್ಪ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಶರ್ಮಾ ಅವರು 14,195 ಮತಗಳನ್ನು ಪಡೆದರೆ, ಸ್ವತಂತ್ರ ಅಭ್ಯರ್ಥಿಯೂ ಆದ ಸರೂರಿ 13,552 ಮತಗಳನ್ನು ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.