ದೇಶ

'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಸರ್ವಾನುಮತದಿಂದ ತಿರಸ್ಕರಿಸಿದ ಕೇರಳ ವಿಧಾನಸಭೆ

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ.ರಾಜೇಶ್ ಮಂಡಿಸಿದ ನಿರ್ಣಯದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಲ್ಲಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ.

'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಸರ್ವಾನುಮತದಿಂದ ತಿರಸ್ಕರಿಸಿದ ಕೇರಳ ವಿಧಾನಸಭೆ
ಪಿಣರಾಯಿ ವಿಜಯನ್
Published On :

ತಿರುವನಂತಪುರಂ: ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆ ಸಂವಿಧಾನ ವಿರೋಧಿ ಎಂದು ಟೀಕಿಸಿದ ಕೇರಳ ವಿಧಾನಸಭೆಯು, ಗುರುವಾರ ಪ್ರಸ್ತಾವನೆಯನ್ನು ತಿರಸ್ಕರಿಸಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ ಮತ್ತು ಅದನ್ನು ಜಾರಿಗೊಳಿಸದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ.ರಾಜೇಶ್ ಮಂಡಿಸಿದ ನಿರ್ಣಯದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಲ್ಲಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ. ಇದು "ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿ"ಯನ್ನು ಪ್ರತಿಬಿಂಬಿಸುತ್ತದೆ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಮತ್ತು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದೆ.

"ಈ ಪ್ರಸ್ತಾವನೆಯನ್ನು ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ರಾಜಕೀಯ ವೈವಿಧ್ಯತೆಯನ್ನು ನಾಶಮಾಡುವ ಕೆಟ್ಟ ತಂತ್ರವೆಂದು ಪರಿಗಣಿಸಲಾಗಿದೆ" ಎಂದು ನಿರ್ಣಯ ಹೇಳಿದೆ.

ಕೋವಿಂದ್ ನೇತೃತ್ವದ ಸಮಿತಿಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಪ್ರಸ್ತಾಪಿಸಿದೆ.

ಪ್ರಸ್ತಾವನೆಯನ್ನು ಜಾರಿಗೊಳಿಸಿದರೆ ಅಧಿಕಾರ ಕೇಂದ್ರೀಕರಿಸಿ ಆರೆಸ್ಸೆಸ್ ಮತ್ತು ಬಿಜೆಪಿಯ ಅಜೆಂಡಾದ ಪ್ರಕಾರ ಏಕೀಕೃತ ಆಡಳಿತಕ್ಕೆ ಕಾರಣವಾಗುತ್ತದೆ ಎಂದು ನಿರ್ಣಯವು ಆರೋಪಿಸಿದೆ.

“ಪ್ರಸ್ತಾವನೆಯು ಅನುಷ್ಠಾನಗೊಂಡರೆ, ರಾಜ್ಯ ಶಾಸಕಾಂಗ ಸಭೆಗಳ ಅಧಿಕಾರ ಮೊಟಕುಗೊಳಿಸುತ್ತದೆ ಮತ್ತು ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಸರ್ಕಾರಗಳಾಗಿ ಕಾರ್ಯನಿರ್ವಹಿಸುವುದಿಲ್ಲ. ಆ ಮೂಲಕ ಅಧಿಕಾರದ ವಿಕೇಂದ್ರೀಕರಣಕ್ಕೆ ಅಡ್ಡಿಪಡಿಸುತ್ತದೆ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿರಾಕರಿಸುತ್ತದೆ” ಎಂದು ನಿರ್ಣಯ ಹೇಳಿದೆ.

ಕೇವಲ ವೆಚ್ಚದ ದೃಷ್ಟಿಯಿಂದ ಚುನಾವಣೆಗಳನ್ನು ನೋಡುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಮತ್ತು ವೆಚ್ಚವನ್ನು ಮೊಟಕುಗೊಳಿಸಲು ಮತ್ತು ಆಡಳಿತವನ್ನು ಸುಗಮಗೊಳಿಸಲು ಸರಳವಾದ ಕ್ರಮಗಳು ಲಭ್ಯವಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.