ಹಿರಿಯ ಉದ್ಯಮಿ Ratan Tata ವಿಧಿವಶ: ಇಂದು ಅಪರಾಹ್ನದವರೆಗೆ ಮುಂಬೈಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು ಭಾರತೀಯ ಕೈಗಾರಿಕೋದ್ಯಮ ವಲಯದ ಒಂದು ಯುಗ ಅಂತ್ಯವಾಗಿದೆ.

ಮುಂಬೈ: ಟಾಟಾ ಗ್ರೂಪ್ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನಿನ್ನೆ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು ಭಾರತೀಯ ಕೈಗಾರಿಕೋದ್ಯಮ ವಲಯದ ಒಂದು ಯುಗ ಅಂತ್ಯವಾಗಿದೆ. ರತನ್ ಟಾಟಾ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ಇಂದು ಒಂದು ದಿನದ ಶೋಕಾಚರಣೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

ಖ್ಯಾತ ಉದ್ಯಮಿ Ratan Tata ವಿಧಿವಶ!
ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ: ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3.30ರವರೆಗೆ ಮುಂಬೈಯ ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (NCPA) ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಎಲ್ಲಾ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಂಬೈ ದಕ್ಷಿಣ ವಲಯ ಹೆಚ್ಚುವರಿ ಆಯುಕ್ತ ಅಭಿನವ್ ದೇಶ್ ಮುಖ್ ತಿಳಿಸಿದ್ದಾರೆ.
ಅಮಿತ್ ಶಾ ಭಾಗಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರತನ್ ಟಾಟಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಮಿತ್ ಶಾ ಅವರು ಭಾರತ ಸರ್ಕಾರದ ಪರವಾಗಿ ಟಾಟಾ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಲಾವೋಸ್ಗೆ ತೆರಳಿರುವ ಹಿನ್ನೆಲೆಯಲ್ಲಿ ಗೃಹ ಸಚಿವರು ಅಂತ್ಯಕ್ರಿಯೆಗಾಗಿ ಮುಂಬೈಗೆ ಆಗಮಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



