ದೇಶ

Air India: ಮೂರು ಗಂಟೆ ಆಗಸದಲ್ಲೇ ಸುತ್ತುಹಾಕಿದ ವಿಮಾನ ಸೇಫ್ ಲ್ಯಾಂಡ್; 140 ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌!

ವಿಮಾನದ ಪೈಲಟ್ ಮತ್ತು ಸಿಬ್ಬಂದಿಯ ಕಾರ್ಯವನ್ನು ವಿಮಾನ ನಿಲ್ದಾಣದಲ್ಲಿದ್ದ ಸಿಬ್ಬಂದಿ ಮತ್ತು ಜನರು ಶ್ಲಾಘಿಸಿದರು. ಈ ಏರ್ ಇಂಡಿಯಾ ವಿಮಾನ ಶುಕ್ರವಾರ ಸಂಜೆ 5.15ಕ್ಕೆ ತಿರುಚ್ಚಿ ವಿಮಾನ ನಿಲ್ದಾಣದಿಂದ ಹೊರಟಿತ್ತು.

Air India: ಮೂರು ಗಂಟೆ ಆಗಸದಲ್ಲೇ ಸುತ್ತುಹಾಕಿದ  ವಿಮಾನ ಸೇಫ್ ಲ್ಯಾಂಡ್; 140 ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌!
ಏರ್ ಇಂಡಿಯಾ ವಿಮಾನ — TNIE
Published On :

ಚೆನ್ನೈ/ತಿರುಚಿ: ಏರ್ ಇಂಡಿಯಾ ವಿಮಾನವೊಂದು ಶುಕ್ರವಾರ ತಮಿಳುನಾಡಿನ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್‌ನಲ್ಲಿ ದೋಷ ಕಂಡುಬಂದಿತ್ತು. ಇದಾದ ನಂತರ ಪೈಲಟ್ ತುರ್ತು ಲ್ಯಾಂಡಿಂಗ್ ಘೋಷಿಸಿದರು. ಸುಮಾರು ಮೂರು ಗಂಟೆಗಳ ಕಾಲ ಗಾಳಿಯಲ್ಲಿ ಸುತ್ತಿದ ನಂತರ ಪೈಲಟ್ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದರು. ಈ ಅವಧಿಯಲ್ಲಿ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲಾಗಿತ್ತು.

ವಿಮಾನ ಇಳಿಯುವ ಮೊದಲು ಎಲ್ಲಾ ಸುರಕ್ಷಿತ ವಿಧಾನಗಳನ್ನು ವ್ಯವಸ್ಥೆಗೊಳಿಸಲಾಯಿತು. ರಾತ್ರಿ 8:15ಕ್ಕೆ ಸುರಕ್ಷಿತವಾಗಿ ಇಳಿದ ನಂತರ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಇದಾದ ಬಳಿಕ ಏರ್ ಇಂಡಿಯಾ ವಿಮಾನದಲ್ಲಿದ್ದ 140 ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ವಿಮಾನದ ಪೈಲಟ್ ಮತ್ತು ಸಿಬ್ಬಂದಿಯ ಕಾರ್ಯವನ್ನು ವಿಮಾನ ನಿಲ್ದಾಣದಲ್ಲಿದ್ದ ಸಿಬ್ಬಂದಿ ಮತ್ತು ಜನರು ಶ್ಲಾಘಿಸಿದರು. ಈ ಏರ್ ಇಂಡಿಯಾ ವಿಮಾನ ಶುಕ್ರವಾರ ಸಂಜೆ 5.15ಕ್ಕೆ ತಿರುಚ್ಚಿ ವಿಮಾನ ನಿಲ್ದಾಣದಿಂದ ಹೊರಟಿತ್ತು.

ವಿಮಾನದ ಹೈಡ್ರಾಲಿಕ್ ವ್ಯವಸ್ಥೆಯಲ್ಲಿನ ದೋಷದ ಬಗ್ಗೆ ಪೈಲಟ್ ಮಾಹಿತಿ ಪಡೆದ ತಕ್ಷಣ, ಪೈಲಟ್ ಎಟಿಸಿಗೆ ಮಾಹಿತಿ ನೀಡಿದರು. ಇದಾದ ನಂತರ ವಿಮಾನ ತಿರುಚ್ಚಿಯ ಆಕಾಶದಲ್ಲಿ ಸುತ್ತುತ್ತಲೇ ಇತ್ತು. ಲ್ಯಾಂಡಿಂಗ್ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆಳಗಿನ ವಿಮಾನ ನಿಲ್ದಾಣದಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ವಿಮಾನದಿಂದ ಇಂಧನ ಕಡಿಮೆ ಮಾಡಿದ ನಂತರ, ಪೈಲಟ್ ಸುರಕ್ಷಿತ ಲ್ಯಾಂಡಿಂಗ್ ಅನ್ನು ಖಚಿತಪಡಿಸಿದರು.

ರಾತ್ರಿ 8:14ಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು. ಈ ಮೊದಲು ವಿಮಾನದ ಇಂಧನವನ್ನು ಕಡಿಮೆ ಮಾಡಲಾಗಿತ್ತು. ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾದ ಬಳಿಕ ವಿಮಾನದ ಪೈಲಟ್ ಅತ್ಯಂತ ಸಂಯಮದಿಂದ ಕಾರ್ಯನಿರ್ವಹಿಸಿದ್ದು ಪ್ರಯಾಣಿಕರಿಗೆ ಸುರಕ್ಷಿತ ಲ್ಯಾಂಡಿಂಗ್ ನ ಭರವಸೆ ನೀಡಿದ್ದು ಕೊನೆಗೆ ವಿಮಾನವನ್ನು ಸೇಫ್ ಆಗಿ ಲ್ಯಾಂಡ್ ಮಾಡಿದರು.

ಏರ್ ಇಂಡಿಯಾ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯವನ್ನು ತಿರುಚ್ಚಿ ವಿಮಾನ ನಿಲ್ದಾಣದ ನಿರ್ದೇಶಕ ಗೋಪಾಲಕೃಷ್ಣನ್ ಖಚಿತಪಡಿಸಿದ್ದರು. ಈ ವಿಮಾನವು ಶಾರ್ಜಾಗೆ ಹೋಗುತ್ತಿತ್ತು ಎಂದು ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ. ವಿಮಾನದಲ್ಲಿ 140 ಪ್ರಯಾಣಿಕರಿದ್ದರು. ವಿಮಾನದ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ದೋಷದ ಸಂದರ್ಭದಲ್ಲಿ ಬೆಲ್ಲಿ ಲ್ಯಾಂಡಿಂಗ್ ಅನ್ನು ಸಹ ಮಾಡಲಾಗುತ್ತದೆ. ಆದರೆ ಇದಕ್ಕೂ ಮೊದಲು ವಿಮಾನದ ಇಂಧನವನ್ನು ಕಡಿಮೆ ಮಾಡಬೇಕಿತ್ತು. ಅದಾದ ನಂತರ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.