ದೇಶ

ಉಜ್ಜಯಿನಿಯಲ್ಲಿ ಮಾಜಿ ಕೌನ್ಸಿಲರ್ ಮನೆಗೆ ನುಗ್ಗಿ ಗುಂಡು ಹಾರಿಸಿ ಹತ್ಯೆ: ಪತ್ನಿ ಬಂಧನ

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೌನ್ಸಿಲರ್ ಹಾಜಿ ಕಲೀಂ ಖಾನ್ ಅಲಿಯಾಸ್ ಗುಡ್ಡು ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಉಜ್ಜಯಿನಿಯಲ್ಲಿ ಮಾಜಿ ಕೌನ್ಸಿಲರ್ ಮನೆಗೆ ನುಗ್ಗಿ ಗುಂಡು ಹಾರಿಸಿ ಹತ್ಯೆ: ಪತ್ನಿ ಬಂಧನ
PTI
Published On :

ಮಧ್ಯಪ್ರದೇಶದ ಉಜ್ಜಯಿನಿಯ ಕಾಂಗ್ರೆಸ್ ನ ಮಾಜಿ ಕೌನ್ಸಿಲರ್ ಒಬ್ಬರನ್ನು ಅವರ ನಿವಾಸದಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೌನ್ಸಿಲರ್ ಹಾಜಿ ಕಲೀಂ ಖಾನ್ ಅಲಿಯಾಸ್ ಗುಡ್ಡು ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಈ ಘಟನೆ ಉಜ್ಜಯಿನಿಯ ನೀಲಗಂಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿ ನೆಲೆಸಿರುವ ಹಾಜಿ ಕಲೀಂ ಖಾನ್ ಅಲಿಯಾಸ್ ಗುಡ್ಡು ಅವರ ಮನೆಯಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಗುಂಡು ಹಾರಿಸಲಾಗಿದೆ. ಹಾಜಿ ಕಲೀಂ ಖಾನ್ ಅವರಿಗೆ ಸುಮಾರು 60 ವರ್ಷ ವಯಸ್ಸಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಆತನ ತಲೆಗೆ ಗುಂಡು ತಗುಲಿದ್ದು, ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಪ್ರಕರಣದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದು, ಆತನ ಪತ್ನಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೆಲ ದಿನಗಳ ಹಿಂದೆಯೂ ಕಲೀಂ ಖಾನ್‌ನನ್ನು ಕೊಲೆ ಮಾಡಲು ಯತ್ನಿಸಲಾಗಿತ್ತು. ಆದರೆ ಆತ ಬದುಕುಳಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈಗ ಈ ವಿಷಯವನ್ನು ಹೆಚ್ಚು ಆಳವಾಗಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತರ ಕುಟುಂಬದ ಇತರ ಸದಸ್ಯರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಜ್ಜಯಿನಿಯಲ್ಲಿ ನಡೆದ ಈ ಘಟನೆಯ ನಂತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಸೃಷ್ಟಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.