ಮಹಾರಾಷ್ಟ್ರ: ಆರ್‌ಎಸ್‌ಎಸ್ ಮೆರವಣಿಗೆ ವೇಳೆ ಉದ್ವಿಗ್ನತೆ, ಎರಡು ಕೇಸ್ ದಾಖಲು
ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ದೂರು ಆಧರಿಸಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದೇವೆ, ಐವರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರಿಗೆ ನೋಟಿಸ್ ಜಾರಿ ಮಾಡಿದ್ದೇವೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ

ರತ್ನಗಿರಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮೆರವಣಿಗೆ ವೇಳೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಘೋಷಣೆ ಕೂಗಿದ ನಂತರ ಉದ್ವಿಗ್ನ ಪರಿಸ್ಥಿತಿವೇರ್ಪಟ್ಟ ಘಟನೆ ಮಹಾರಾಷ್ಟ್ರದ ರತ್ನಗಿರಿ ನಗರದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಕೊಂಕಣನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಕೆಲ ಸಮಯದ ನಂತರ ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ.
ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ದೂರು ಆಧರಿಸಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದೇವೆ, ಐವರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರಿಗೆ ನೋಟಿಸ್ ಜಾರಿ ಮಾಡಿದ್ದೇವೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಎಂದು ರತ್ನಗಿರಿ ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಸರಾ ಹಬ್ಬದ ಮುನ್ನಾದಿನದಂದು ಆರ್‌ಎಸ್‌ಎಸ್ ಈ ಪ್ರದೇಶದಲ್ಲಿ ಮೆರವಣಿಗೆ (ಪಥ ಸಂಚಲನ) ನಡೆಸಿದಾಗ ಅಲ್ಪಸಂಖ್ಯಾತ ಸಮುದಾಯದ ಜನರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಘೋಷಣೆಗಳನ್ನು ಕೂಗಿದ್ದರಿಂದ ಉದ್ವಿಗ್ನ ಪರಿಸ್ಥಿತಿವೇರ್ಪಟ್ಟಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.
ಯಾವುದೇ ಹಿಂಸಾಚಾರ ನಡೆದಿಲ್ಲ, ತಡರಾತ್ರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಆರ್ ಎಸ್ ಎಸ್ ಪರ ಬೆಂಬಲಿಗರು ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಿಸಲು ಒತ್ತಾಯಿಸಿದರು. ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳಡಿ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



