Video: ಬೆಂಕಿ ಹೊತ್ತಿಕೊಂಡಿರುವಾಗಲೇ ರಸ್ತೆ ಮೇಲೆ ಚಲಿಸಿದ ಕಾರು, ದಿಕ್ಕಾಪಾಲಾಗಿ ಓಡಿದ ಜನ!
ಕಾರು ರಸ್ತೆ ಮೇಲೆ ಚಲಿಸುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಕಾರು ವೇಗವಾಗಿ ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ಜೈಪುರ: ಅಪಘಾತಕ್ಕೀಡಾಗಿ ಬೆಂಕಿಗಾಹುತಿಯಾಗಿದ್ದ ಕಾರೊಂದು ನೋಡ ನೋಡುತ್ತಲೇ ರಸ್ತೆ ಮೇಲೆ ವೇಗವಾಗಿ ಚಲಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ರಾಜಸ್ತಾನದ ಜೈಪುರ ಜಿಲ್ಲೆಯ ಅಜ್ಮೀರ್ ರಸ್ತೆಯ ಸುದರ್ಶನಪುರ ಪುಲಿಯಾ ಕಡೆಗೆ ಚಾಲಕರಹಿತ ಕಾರು ಶನಿವಾರ ಎಲಿವೇಟೆಡ್ ರಸ್ತೆಯಲ್ಲಿ ವೇಗವಾಗಿ ಚಲಿಸಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ದಾರಿಹೋಕ ಪ್ರಯಾಣಿಕರು ಅದನ್ನು ನಿಂತು ನೋಡುತ್ತಿದ್ದಾಗಲೇ ಕಾರು ನೋಡನೋಡುತ್ತಲೇ ವೇಗವಾಗಿ ಚಲಿಸಿದೆ. ಪರಿಣಾಮ ವಾಹನ ಚಾಲಕರು ತಮ್ಮ ವಾಹನಗಳನ್ನು ಮತ್ತು ತಮ್ಮ ಪ್ರಾಣ ಉಳಿಸಿಕೊಳ್ಳಲು ಪರದಾಡಿದರು.
ಕಾರು ರಸ್ತೆ ಮೇಲೆ ಚಲಿಸುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಕಾರು ವೇಗವಾಗಿ ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಬಳಿಕ ಕಾರು ಬೆಂಕಿ ಹತ್ತಿಕೊಂಡು ಸಂಪೂರ್ಣ ಉರಿದು ಹೋಗಿದೆ.
ವರದಿಗಳ ಪ್ರಕಾರ, ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಇದನ್ನು ದಾರಿಹೋಕರೊಬ್ಬರು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದೃಷ್ಟವಶಾತ್ ಚಾಲಕ ಮತ್ತು ಇತರರು ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



