ಮುಂಬೈ ಪ್ರವೇಶಿಸುವ ಲಘು ವಾಹನಗಳಿಗೆ ಟೋಲ್ ಇಲ್ಲ: ವಿಧಾನಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರ ಸಿಎಂ ಘೋಷಣೆ
ಇಂದು ಬೆಳಗ್ಗೆ ಮುಂಬೈನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಟೋಲ್ ವಿನಾಯಿತಿ ನಿರ್ಧಾರಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದರು.

ಮುಂಬೈ: ಅಕ್ಟೋಬರ್ 14 ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಎಲ್ಲಾ ಐದು ಟೋಲ್ ಬೂತ್ಗಳಲ್ಲಿ ಮುಂಬೈ ಪ್ರವೇಶಿಸುವ ಲಘು ಮೋಟಾರು ವಾಹನಗಳಿಗೆ ಸಂಪೂರ್ಣ ಟೋಲ್ ವಿನಾಯಿತಿಯನ್ನು ಮಹಾರಾಷ್ಟ್ರ ಸರ್ಕಾರ ಸೋಮವಾರ ಘೋಷಿಸಿದೆ.
ಇಂದು ಬೆಳಗ್ಗೆ ಮುಂಬೈನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಟೋಲ್ ವಿನಾಯಿತಿ ನಿರ್ಧಾರಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಟೋಲ್ ಬೂತ್ಗಳಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ಟೋಲ್ ರದ್ದುಗೊಳಿಸುವ ಬೇಡಿಕೆ ಇತ್ತು ಎಂದರು.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಈ ಕ್ರಮ ಕೈಗೊಳ್ಳಲಾಗಿದ್ದು, ಟೋಲ್ ವಿನಾಯಿತಿ ದೀಪಾವಳಿಗೆ ಮುಂಚಿತವಾಗಿ ಮುಂಬೈಗೆ ಬರುವ ಮತ್ತು ಹೊರಗೆ ಪ್ರಯಾಣಿಸುವ ಜನರಿಗೆ ಅನುಕೂಲವಾಗುತ್ತದೆ.
ಪ್ರಯಾಣಿಕರು ಐದು ಬೂತ್ಗಳಾದ ದಹಿಸರ್, ಎಲ್ಬಿಎಸ್ ರಸ್ತೆ-ಮುಲುಂಡ್, ಈಸ್ಟರ್ನ್ ಎಕ್ಸ್ಪ್ರೆಸ್ ಹೈವೇ-ಮುಲುಂಡ್, ಐರೋಲಿ ಕ್ರೀಕ್ ಸೇತುವೆ ಮತ್ತು ವಾಶಿಯಲ್ಲಿ ಟೋಲ್ ಪಾವತಿಸದೆ ಪ್ರಯಾಣಿಸಬಹುದು.
ಲಘು ಮೋಟಾರು ವಾಹನಗಳಲ್ಲಿ ಕಾರುಗಳು(ಹ್ಯಾಚ್ಬ್ಯಾಕ್ಗಳು, ಸೆಡಾನ್ಗಳು ಮತ್ತು SUVಗಳು), ಜೀಪ್ಗಳು, ವ್ಯಾನ್ಗಳು, ಆಟೋ-ರಿಕ್ಷಾಗಳು, ಟ್ಯಾಕ್ಸಿಗಳು, ಡೆಲಿವರಿ ವ್ಯಾನ್ಗಳು ಮತ್ತು ಸಣ್ಣ ಟ್ರಕ್ಗಳು ಸೇರಿವೆ.
ಪ್ರತಿದಿನ ಆರು ಲಕ್ಷಕ್ಕೂ ಹೆಚ್ಚು ವಾಹನಗಳು ಮುಂಬೈ ಟೋಲ್ ಬಳಸುತ್ತಿದ್ದು, ಅದರಲ್ಲಿ ಶೇ.80 ರಷ್ಟು ಲಘು ಮೋಟಾರು ವಾಹನಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟೋಲ್ ವಿನಾಯಿತಿ ಕ್ರಮದಿಂದ ಸಮಯ, ಇಂಧನವನ್ನು ಉಳಿಸುತ್ತದೆ ಮತ್ತು ಮಾಲಿನ್ಯವನ್ನು ಕಡಿಮೆ ಮಾಡುತ್ತದೆ ಎಂದು ಸಿಎಂ ಶಿಂಧೆ ಹೇಳಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದ್ದ, ಈ ಟೋಲ್ ವಿನಾಯಿತಿ ನಿರ್ಧಾರ ಎಲೆಕ್ಷನ್ ಗಿಮಿಕ್ ಎಂದು ವಿಪಕ್ಷಗಳು ಟೀಕಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



