ದೇಶ

ಬಾಂಬ್ ಬೆದರಿಕೆ: ಮುಂಬೈ-ನ್ಯೂಯಾರ್ಕ್ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ಪ್ರಸ್ತುತ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಇಳಿದು ವಿಮಾನವನ್ನು ಶೋಧಿಸಲಾಗುತ್ತಿದೆ.

ಬಾಂಬ್ ಬೆದರಿಕೆ: ಮುಂಬೈ-ನ್ಯೂಯಾರ್ಕ್ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ
ಏರ್ ಇಂಡಿಯಾ ವಿಮಾನ
Published On :

ಮುಂಬೈ: ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮುಂಬೈನಿಂದ 239 ಪ್ರಯಾಣಿಕರನ್ನು ಹೊತ್ತುಕೊಂಡು ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಸೋಮವಾರ ದೆಹಲಿ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು,

ಪ್ರಸ್ತುತ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಇಳಿದು ವಿಮಾನವನ್ನು ಶೋಧಿಸಲಾಗುತ್ತಿದೆ.

ವಿಮಾನವು ಪ್ರಸ್ತುತ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದು ತಂಗಿದೆ. ವಿಮಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಶಿಷ್ಠಾಚಾರದ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಟ್ವೀಟ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ಏರ್ ಹೇಳಿಕೆ ಬಿಡುಗಡೆ ಮಾಡಿದೆ. ಅಕ್ಟೋಬರ್ 14 ರಂದು ಮುಂಬೈನಿಂದ ನ್ಯೂಯಾರ್ಕ್ ಗೆ ಹಾರಾಟ ನಡೆಸುತ್ತಿದ್ದ ಎI119 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತು. ಸರ್ಕಾರದ ಭದ್ರತಾ ನಿಯಂತ್ರಣ ಸಮಿತಿಯ ಸೂಚನೆಗಳ ಮೇರೆಗೆ ದೆಹಲಿಗೆ ತಿರುಗಿಸಲಾಯಿತು.

ಎಲ್ಲಾ ಪ್ರಯಾಣಿಕರು ಇಳಿದು ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿದ್ದಾರೆ. ಏರ್ ಇಂಡಿಯಾ ತನ್ನ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಬದ್ಧವಾಗಿ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.